ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಾಗರಿಕ ಹಕ್ಕು ಸುರಕ್ಷಣೆ ವಿಷಯ ತಿಳಿಯಿರಿ’

‘ಒಂದು ದಿನದ ಕಾರ್ಯಾಗಾರ ಮತ್ತು ವಿಚಾರ ಗೋಷ್ಠಿ’ ಜಿಲ್ಲಾಧಿಕಾರಿ ಕರೀಗೌಡ
Last Updated 2 ಮಾರ್ಚ್ 2019, 14:12 IST
ಅಕ್ಷರ ಗಾತ್ರ

ದೇವನಹಳ್ಳಿ: ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ನಾಗರಿಕ ಹಕ್ಕು ಸಂರಕ್ಷಣ ಅಧಿನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ‘ಒಂದು ದಿನದ ಕಾರ್ಯಾಗಾರ ಮತ್ತು ವಿಚಾರಗೋಷ್ಠಿ’ ಉದ್ಘಾಟಿಸಿ ಅವರು ಮಾತನಾಡಿದರು.

ನಾಗರಿಕ ಹಕ್ಕು ಸಂರಕ್ಷಣ ಅಧಿನಿಯಮ 1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ1989 ಎಸ್.ಪಿ, ಟಿ.ಎಸ್.ಪಿ 2013 ಕಾಯ್ದೆ ಮತ್ತು ಸುಳ್ಳು ಜಾತಿ ಪ್ರಮಾಣ ಪತ್ರ ವಿಷಯಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಅವರು ಸೂಚಿಸಿದರು. ಒಂದು ದಿನದ ವಿಚಾರ ಗೋಷ್ಠಿ ಮತ್ತು ಕಾರ್ಯಾಗಾರದಲ್ಲಿ ಭಾಗವಹಿಸಿರುವ ಎಲ್ಲ ಅಧಿಕಾರಿಗಳು ಈ ಕಾಯ್ದೆಗಳ ಬಗ್ಗೆ ವಿವಿಧ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರದಲ್ಲಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಮಾಜದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಾಗೂ ಸಾಮಾನ್ಯ ವರ್ಗದವರ ನಡುವೆ ಇಂದಿಗೂ ತುಂಬಾ ಅಂತರವಿದೆ. ಈ ಅಂತರವನ್ನು ಕಡಿಮೆ ಮಾಡಲು ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಲೇ ಬಂದಿದೆ.2013ರ ಡಿಸೆಂಬರ್‌ನಲ್ಲಿ ಅಸ್ತಿತ್ವಕ್ಕೆ ಬಂದ ಟಿಎಸ್‌ಪಿ, ಎಸ್‌ಸಿಎಸ್‌ಪಿ ಕಾಯ್ದೆಯ ಸಾಧಕ ಬಾಧಕಗಳ ಬಗ್ಗೆ ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ, ಆಯುಕ್ತರ ಕಚೇರಿಯ ಹೆಚ್ಚುವರಿ ನಿರ್ದೇಶಕ (ಆಡಳಿತ) ಡಾ.ವಿ.ಸೌಂದರ್ ರಾಜ್ ಮಾಹಿತಿ ನೀಡಿದರು.

ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆ ತಳ ಸಮುದಾಯಗಳ ಅಧ್ಯಯನ ಕೇಂದ್ರ, ಸಹಾಯಕ ಪ್ರಾಧ್ಯಪಕ ಡಾ.ಆರ್.ವಿ ಚಂದ್ರಶೇಖರ್ ಮಾತನಾಡಿ, ‘ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ (ಸಫಾಯಿ ಕರ್ಮಚಾರಿ) ವೃತ್ತಿಯಲ್ಲಿ ತೊಡಗಿರುವವರನ್ನು ಮುಖ್ಯವಾಹಿನಿಗೆ ತರುವಲ್ಲಿ ಆಯೋಗದ ಪಾತ್ರ ಹಾಗೂ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಉಪನ್ಯಾಸ ನೀಡಿದರು.

ಮೂರನೇ ಅವಧಿಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರವನ್ನು ಕಾನೂನುಬಾಹಿರವಾಗಿ ಪಡೆದು ಉದ್ಯೋಗ ಪಡೆದಿರುವವರಿಗೆ ಕಾನೂನಿನಡಿ ಇರುವ ಶಿಕ್ಷೆಗಳು ಮತ್ತು ಅವುಗಳನ್ನು ತಡೆಗಟ್ಟುವಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಪಾತ್ರ ಹಾಗೂ ಕರ್ತವ್ಯ ಎಂಬ ವಿಷಯದ ಬಗ್ಗೆ ನಾಗರಿಕರ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಡಿವೈಎಸ್ಪಿ ಆರ್.ಜಯರಾಮ್ ಹಾಗೂ ನಾಗರಿಕ ಹಕ್ಕು ಸಂರಕ್ಷಣ ಅಧಿನಿಯಮ 1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989ಕ್ಕೆ ಸಂಬಂಧಿಸಿಂತೆ ಡೈರೆಕ್ಟರ್ ಆಫ್ ಪ್ರಾಷಿಕ್ಯೂಷನ್ ಉಪನಿರ್ದೇಶಕ ಕೆ.ರುದ್ರಸ್ವಾಮಿ ಉಪನ್ಯಾಸ ನೀಡಿದರು.

ಕಾರ್ಯಾಗಾರದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಮುಖ್ಯ ಯೋಜನಾಧಿಕಾರಿ ವಿನೂತರಾಣಿ, ಪೊಲೀಸ್ ಅಧೀಕ್ಷರ ಕೆ.ಬಿ.ಪಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರೇಮನಾಥ್, ಸಹಾಯಕ ನಿರ್ದೇಶಕ ಚನ್ನಬಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT