ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಿಗೆಯಲ್ಲಿ ಕಾನೂನು ಸಲಹಾ ಕೇಂದ್ರ ಆರಂಭ

Published 26 ಮಾರ್ಚ್ 2024, 5:11 IST
Last Updated 26 ಮಾರ್ಚ್ 2024, 5:11 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನಲ್ಲಿ ಜಾಲಿಗೆ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಕಾನೂನು ಸಲಹಾ ಕೇಂದ್ರ ಸೋಮವಾರ ಆರಂಭವಾಯಿತು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸಂಜೀವ್ ಖಾನ್ಹ ಅವರು ಕೇಂದ್ರವನ್ನ ಉದ್ಘಾಟಿಸಿದರು.

ನಂತರ ಉಚಿತ ಕಾನೂನು ನೆರವು ಬಗ್ಗೆ ಗ್ರಾಮಸ್ಥರಿಗೆ ಕಾನೂನು ಜಾಗೃತಿ ಮೂಡಿಸಿ, ರಾಷ್ಟ್ರೀಯ ಕಾನೂನು ‌ಸೇವೆ ಬಗ್ಗೆ ಜನರ ಜೊತೆಗೆ ಸಮಾಲೋಚಿಸಿದರು.

ಬಳಿಕ ಹೆಗ್ಗನಹಳ್ಳಿಯ ಆಯುಷ್ ಆಸ್ಪತ್ರೆಗೆ ಭೇಟಿ ನೀಡಿ ಗಿಡ ಮೂಲಿಕೆ ಔಷಧಿ ಬಗ್ಗೆ ವೈದ್ಯರ ಜೊತೆ ಚರ್ಚಿಸಿದರು.

ಜಾಲಿಗೆ ಗ್ರಾಮ ಪಂಚಾಯಿತಿಯ ಸ್ವಚ್ಛ ಸಂಕೀರ್ಣ ಘಟಕ ವೀಕ್ಷಿಸಿದರು. ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆಗೆ ಸಂವಾದ ನಡೆಸಿದರು.

ಜಿಲ್ಲಾಧಿಕಾರಿ ಎನ್. ಶಿವಶಂಕರ , ಜಿ.ಪಂ ಸಿಇಒ ಕೆ.ಎನ್‌. ಅನುರಾಧ, ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ, ಉಪವಿಭಾಗಾಧಿಕಾರಿ ಎ.ಸಿ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ , ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಜಾಲಿಗೆ ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT