ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಪಾಲಕರು

‍ಪೋಲಿಸ್ ಸಿಬ್ಬಂದಿ ಖಾಸಿ ವಾಹನ ದಾಖಲೆಗಳ ಪರಿಶೀಲನೆ ನಡೆಸಿದ ಡಿವೈಎಸ್‌ಪಿ
Last Updated 16 ಜನವರಿ 2021, 2:45 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪೊಲೀಸ್‌ ಪರೇಡ್‌ ಸಂದರ್ಭದಲ್ಲಿ ಪೊಲೀಸ್‌ ಸಿಬ್ಬಂದಿಯ ಖಾಸಗಿ ದ್ವಿಚಕ್ರ ವಾಹನಗಳ ದಾಖಲಾತಿಗಳನ್ನು ಡಿ.ವೈಎಸ್‌ಪಿ ಟಿ.ರಂಗಪ್ಪ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿ, ಸಾರ್ವಜನಿಕರ ವಾಹನಗಳ ತಪಾಸಣೆ ನಡೆಸುವ ಪೊಲೀಸ್‌ ಸಿಬ್ಬಂದಿ ಬಳಸುವ ಖಾಸಗಿ ವಾಹನಗಳ ಎಲ್ಲ ದಾಖಲಾತಿಗಳು ಸರಿಯಾಗಿರಬೇಕು. ಈ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ಉಪವಿಭಾಗದ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಬಳಸುತ್ತಿರುವ ವಾಹನಗಳ ದಾಖಲಾತಿ, ಚಾಲನ ಪರವಾನಗಿ, ವಾಹನದ ವಿಮೆ ಮತ್ತಿತರೆ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ದಾಖಲಾತಿ ಸರಿ ಇಲ್ಲದ ಸಿಬ್ಬಂದಿಗೆ 15 ದಿನಗಳ ಕಾಲ ಗಡುವು ನೀಡಲಾಗಿದೆ ಎಂದರು.

ಪೊಲೀಸರು ಸೇರಿದಂತೆ ಎಲ್ಲರ ವಾಹನಗಳು ಅಪಘಾತಕ್ಕೆ ಒಳಗಾಗುವುದು ಸಾಮಾನ್ಯ.. ಇಂತಹ ಸಂದರ್ಭದಲ್ಲಿ ಗಾಯಗೊಂಡಾಗ ಪರಿಹಾರ ಪಡೆಯಲು ನ್ಯಾಯಾಲಯಕ್ಕೆ ಅಲೆದಾಡಬೇಕಾಗುತ್ತದೆ. ಮೋಟಾರು ವಾಹನದ ಎಲ್ಲ ಕಾನೂನು ತಿಳಿದವರೇ ತಪ್ಪು ಮಾಡಿದಾಗ ನ್ಯಾಯಾಲಯದಲ್ಲೂ ಸಹ ಕಷ್ಟವಾಗಲಿದೆ ಎಂದರು.

1992ರ ಪೊಲೀಸ್‌ ಕಾನೂನಿನ ಅಡಿಯಲ್ಲಿ ಪೆಟ್ಟಿ ಕೇಸ್‌ಗಳನ್ನು ದಾಖಲು ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್‌ ಸಿಬ್ಬಂದಿ ಸೂಕ್ತ ರೀತಿಯಲ್ಲಿ ದೂರು ದಾಖಲಿಸಿದರೆ ದೊಡ್ಡ ಮಟ್ಟದ ಅಪರಾಧ ತಡೆಗಟ್ಟಲು ಹಾಗೂ ಸಾರ್ವಜನಿಕರು ನೆಮ್ಮದಿಯಿಂದ ದಿನ ನಿತ್ಯದ ಬದುಕು ನಡೆಸಲು ಸಹಕಾರಿಯಾಗಲಿದೆ ಎಂದರು.

ಪೊಲೀಸ್‌ ಕೆಲಸದ ಕಾರ್ಯವೈಖರಿ ಬದಲಾಗಬೇಕಿದೆ. ಜನಸ್ನೇಹಿ ಪೊಲೀಸ್‌ ಆಗಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಾರ್ವಜನಿಕ ವಲಯದಲ್ಲಿ ಪೊಲೀಸರ ಬಗ್ಗೆ ಗೌರವ ಮೂಡಲು ಸಾಧ್ಯ. ಆನ್‌ಲೈನ್‌ ಗೇಮ್‌ಗಳು ಸೇರಿದಂತೆ ಮಟ್ಕಾ, ಜೂಜು, ಗಾಂಜಾ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೂ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಅವಕಾಶ ಇಲ್ಲದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಬೀಟ್‌ ಪೊಲೀಸ್‌ ಸಿಬ್ಬಂದಿ ಮೇಲಿದೆ. ಈ ಬಗ್ಗೆ ಹೆಚ್ಚಿನ ನಿಗಾವಹಿಸುವ ಮೂಲಕ ಇಂತಹ ಕೃತ್ಯಗಳಲ್ಲಿ ತೊಡಗಿರುವವರ ಹಾಗೂ ಇಂತಹ ಕೃತ್ಯಗಳಿಗೆ ಪ್ರೋತ್ಸಾಹ ನೀಡುತ್ತಿರುವವ ವಿರುದ್ಧ ದೂರು ದಾಖಲಿಸಿ ರೌಡಿ ಶೀಟರ್‌ ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಠಾಣೆಗಳ ಸಬ್‌ಇನ್‌ಸ್ಪೆಕ್ಟರ್‌ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT