ದಾಬಸ್ಪೇಟೆ: ಸೋಂಪುರ ಹೋಬಳಿ ಶಿವಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರಿಯಪ್ಪನಪಾಳ್ಯದಲ್ಲಿ ಚಿರತೆ ದಾಳಿಯಿಂದ ಮೇಕೆ ಮೃತಪಟ್ಟಿದೆ.

ಗಂಗಯ್ಯ ಎಂಬುವವರಿಗೆ ಸೇರಿದ ಮೇಕೆ ಹೊಲದಲ್ಲಿ ಮೇಯುತ್ತಿದ್ದಾಗ ಚಿರತೆ ದಾಳಿ ಮಾಡಿದೆ. ‘ನಮ್ಮ ಸಿಬ್ಬಂದಿಯನ್ನು ಕಳುಹಿಸಿ ವರದಿ ಪಡೆದುಕೊಂಡಿದ್ದು, ಮೇಕೆ ಕಳೆದುಕೊಂಡ ರೈತರಿಗೆ ಸರ್ಕಾರದಿಂದ ಆನ್ಲೈನ್ ಮೂಲಕ ಪರಿಹಾರ ಒದಗಿಸಲಾಗುತ್ತದೆ’ ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.

ಸೀಗೇಪಾಳ್ಯ, ಕಂಬಾಳು ಗೊಲ್ಲರಹಟ್ಟಿ, ಹುರಿಯಪ್ಪನಪಾಳ್ಯ ಈ ಗ್ರಾಮಗಳು ಅರಣ್ಯದ ಅಂಚಿನಲ್ಲಿವೆ. ಕಾಡು ಪ್ರಾಣಿಗಳು ಊರಿಗೆ ನುಗ್ಗಿ ಮನುಷ್ಯರು, ಮತ್ತು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಾ ಬಂದಿವೆ. ಕೃಷಿ ಹಾಗೂ ಹೈನುಗಾರಿಕೆಯಿಂದ ಜೀವನ ಮಾಡುತ್ತಿರುವ ಇಲ್ಲಿನ ಜನ ಜೀವನಕ್ಕೆ ಸಮಸ್ಯೆಯಾಗಿದೆ. ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೀಗೇಪಾಳ್ಯದ ಶ್ರೀನಿವಾಸ್ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.