ತೂಬಗೆರೆ (ದೊಡ್ಡಬಳ್ಳಾಪುರ): ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯ ರಸ್ತೆಯಲ್ಲಿನ ಲಘುಮೇನಹಳ್ಳಿಯ ಸಮೀಪದ ರೇಸಾರ್ಟ್‌ನಲ್ಲಿ ಫೆ. 17ರ ರಾತ್ರಿ 11 ಗಂಟೆ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.
ಚಿರತೆ ಒಡಾಡುತ್ತಿರುವ ದೃಶ್ಯ ಕಂಡು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ತಿಂಗಳ ಹಿಂದೆಯಷ್ಟೇ ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿ ರಾತ್ರಿ ವೇಳೆ ಕಾರಿಗೆ ಅಡ್ಡವಾಗಿ ಚಿರತೆ ಬಂದಿತ್ತು ಎಂದು ದೇವಾಲಯಕ್ಕೆ ಹೋಗುತ್ತಿದ್ದ ಭಕ್ತರೊಬ್ಬರು ತಿಳಿಸಿದ್ದರು.
ಚಿರತೆ ಕಾಣಿಸಿಕೊಂಡಿರುವ ಸುದ್ದಿಯಿಂದಾಗಿ ಗ್ರಾಮಸ್ಥರು ಒಬ್ಬೊಬ್ಬರೇ ಹೊಲ, ತೋಟದತ್ತ ತೆರಳಲು ಭಯಪಡುವಂತಾಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.