ದೊಡ್ಡಬಳ್ಳಾಪುರ: ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಇದು ಮಾನವನಿಂದಲೇ ಸರಿಯಾಗಬೇಕಿದೆ. ಮುಂದಿನ ಪೀಳಿಗೆಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸದಿದ್ದರೆ ಮುಂದೆ ಹೆಚ್ಚಿನ ಅಪಾಯ ಎದುರಾಗಲಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ಪಂಚಾಯಿತಿ, ಅರಣ್ಯ ಇಲಾಖೆ,ನಗರಸಭೆ ಹಾಗೂ ತಾಲ್ಲೂಕು ವಕೀಲರ ಸಂಘದ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚಣೆ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

1972ರಲ್ಲಿ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಪರಿಸರ ದಿನಾಚರಣೆ ಆಚರಿಸಬೇಕು ಎಂದು ನಿರ್ಧರಿಸಲಾಗಿ, 1973ರಿಂದ ಪರಿಸರ ದಿನದ ಆಚರಣೆ ಪ್ರಾರಂಭವಾಯಿತು. ಅಂತೆಯೇ ಜೂ 5 ವಿಶ್ವ ಪರಿಸರ ದಿನಾಚರಣೆ. ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮ. ಪ್ರತಿ ವರ್ಷ ನಿರ್ದಿಷ್ಟ ವಸ್ತು ವಿಷಯವನ್ನಾಧರಿಸಿ ಪ್ರತಿ ವರ್ಷ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಗೌರವ ಅಧ್ಯಕ್ಷ ರಾ.ಬೈರೇಗೌಡ ಮಾತನಾಡಿ, ‘ಪರಿಸರ, ಪಕೃತಿ ನಮಗೆ ಎಲ್ಲವನ್ನೂ ನೀಡುತ್ತದೆ. ಅಗಣಿತವಾದ ಅಮೂಲ್ಯ ಕೊಡುಗೆಗಳನ್ನು ನೀಡುತ್ತದೆ. ಪ್ರತಿಯೊಂದು ಜೀವ ಸಂಕುಲಕ್ಕೆ ಅಗತ್ಯ, ಅನಿವಾರ್ಯ. ಆದರೆ ನಾವಿಂದು ಪರಿಸರಕ್ಕಾಗಿ ಏನನ್ನು ಕೊಟ್ಟಿದ್ದೇವೆ, ಕೊಡುತ್ತಿದೇವೆ ಎಂಬುದನ್ನು ಪ್ರತಿಯೊಬ್ಬ ಮಾನವನು ತನಗೆ ತಾನೇ ಹಾಕಿಕೊಳ್ಳಬೇಕಾದ ಪ್ರಶ್ನೆಯಾಗಿದೆ. ಪರಿಸರ ದಿನಾಚರಣೆಯಂದು ಸಸಿ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ’ ಎಂದು ಹೇಳಿದರು.

‘ನೆಲ, ಮಣ್ಣು, ಬೆಳೆ, ಹಣ್ಣು ಹಂಪಲು ಹೀಗೆ ಎಲ್ಲವೂ ಉಳಿಯುವಂತಾಗಲು ಈ ದಿನವನ್ನು ಜಾಗೃತ ದಿನವೆಂದು ಆಚರಿಸಲಾಗುತ್ತಿದೆ. ಆದರೆ ಇದು ಒಂದು ದಿನಕ್ಕೆ ಸೀಮಿತವಾಗದೇ ಪರಿಸರ ಕಾಳಜಿ ನಿರಂತರವಾಗಿರಬೇಕು’ ಎಂದರು.

ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಂ.ಕೆ.ರಮೇಶ್, ನಗರಸಭೆ ಪೌರಾಯುಕ್ತ ಆರ್.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಂ.ದ್ಯಾಮಪ್ಪ, ತಾಲ್ಲೂಕು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ಸುಬ್ಬಣ್ಣ, ವಲಯ ಅರಣ್ಯ ಅಧಿಕಾರಿ ಎನ್.ಲಕ್ಷ್ಮೀನಾರಾಯಣ, ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಆರ್.ನಾಗಭೂಷಣ, ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ನಟರಾಜು, ರಾಜಶೇಖರ್, ವಕೀಲರಾದ ವಕೀಲರಾದ ಪ್ರಭಾಕರ ರಾಜು, ಎನ್.ಸುನಿತ, ಮಂಜುಳಾ,ರೇಣುಕಾ ಮೂರ್ತಿ, ಚನ್ನೇಗೌಡ, ನಗರಸಭೆ ಆರೋಗ್ಯ ನಿರೀಕ್ಷಕಿ ರೂಪಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.