ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘಟನೆಗಳು ಬದ್ಧತೆ ಉಳಿಸಿಕೊಳ್ಳಲಿ: ಸಿ.ಮುನಿಯಪ್ಪ

Last Updated 11 ಮೇ 2019, 12:57 IST
ಅಕ್ಷರ ಗಾತ್ರ

ವಿಜಯಪುರ: ‘ಮಾನವ ಹಕ್ಕುಗಳಿಗೆ ಧಕ್ಕೆ ಬಾರದಂತೆ ಸಂಘಟನೆಗಳು ಕಾರ್ಯನಿರ್ವಹಿಸಬೇಕು. ಆಗ ಮಾತ್ರ ದೌರ್ಜನ್ಯ, ದಬ್ಬಾಳಿಕೆ ತಡೆಗಟ್ಟಲು ಸಾಧ್ಯವಾಗುತ್ತದೆ’ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ವೇದಿಕೆ ಕಾರ್ಯಾಧ್ಯಕ್ಷ ಸಿ.ಮುನಿಯಪ್ಪ ಹೇಳಿದರು.

ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಹಾಗೂ ಸಂಘಟನಾ ಕಾರ್ಯದರ್ಶಿ ನೇಮಕಾತಿ ಸಭೆಯಲ್ಲಿ ಅವರು ಮಾತನಾಡಿದರು. ‘ದೌರ್ಜನ್ಯ, ದಬ್ಬಾಳಿಕೆ ನಿಲ್ಲಬೇಕಾದರೆ ಸಂಘಟನೆಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ತುಳಿತಕ್ಕೆ ಒಳಗಾದ ಜನರ ಹಿತಕಾಯುವುದರ ಜತೆಗೆ, ಮಾನವ ಹಕ್ಕುಗಳ ಉಲ್ಲಂಘನೆಯಾದಾಗ ನ್ಯಾಯದ ಪರ ಹೋರಾಟ ಮಾಡುವಂತಹ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಬೇಕು’ ಎಂದರು.

ರಾಜ್ಯ ಘಟಕದ ಹಿರಿಯ ಉಪಾಧ್ಯಕ್ಷ ವಿ.ರಾಮಚಂದ್ರಪ್ಪ ಮಾತನಾಡಿ ‘ಸತ್ಯ, ನ್ಯಾಯ, ಧರ್ಮದ ಆಧಾರದಲ್ಲಿ ಸಂಘಟನೆಗಳು ಕೆಲಸ ಮಾಡಬೇಕು. ಇತ್ತೀಚಿಗೆ ಜನರಲ್ಲಿ ಸಂಘಟನೆಗಳ ಬಗ್ಗೆ ವಿಶ್ವಾಸ ಇಲ್ಲದಂತಾಗುತ್ತಿದೆ. ಜನರ ವಿಶ್ವಾಸ ಗಳಿಸಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ’ ಎಂದರು.

ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಶಬ್ಬೀರ್ ಅಹಮದ್ ಮಾತನಾಡಿ ‘ಕಾರ್ಮಿಕರನ್ನು ಸಂಘಟಿಸುವುದರ ಜತೆಗೆ ಅವರಿಗೆ ಸಿಗಬೇಕಾಗಿರುವ ಹಕ್ಕುಗಳನ್ನು ತಲುಪಿಸುವ ಪ್ರಾಮಾಣಿಕ ಕಾರ್ಯ ಆಗಬೇಕು’ ಎಂದು ಹೇಳಿದರು.

ರಾಜ್ಯ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ಎಂ.ಡಿ.ರಾಮಚಂದ್ರಪ್ಪ, ಚನ್ನರಾಯಪಟ್ಟಣ ವೆಂಕಟರಮಣಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT