ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷರತೆಯಿಂದ ದೇಶದ ಅಭಿವೃದ್ಧಿ

Last Updated 9 ಸೆಪ್ಟೆಂಬರ್ 2020, 15:49 IST
ಅಕ್ಷರ ಗಾತ್ರ

ದೇವನಹಳ್ಳಿ: ‘ದೇಶದ ಪ್ರತಿಯೊಬ್ಬ ಪ್ರಜೆಯೂ ಸಾಕ್ಷರರಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ವತಿಯಿಂದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಶೇ 77.93ರಷ್ಟು ಇದೆ. ಸಾಕ್ಷರತಾ ಆಂದೋಲನ ಪ್ರಾರಂಭವಾದಾಗ ಪ್ರತಿಯೊಂದು ಹಳ್ಳಿಗಳಲ್ಲಿ ಮನೆಗಳಿಗೆ ತೆರಳಿ, ಅಕ್ಷರ ಜ್ಞಾನದ ಕುರಿತು ಜಾಗೃತಿ ಮೂಡಿಸಲಾಗಿದೆ. ಇದರ ಪರಿಣಾಮ ಪ್ರಸ್ತುತ ಸ್ತ್ರೀಯರು ಸ್ವತಃ ಸಂಘ-ಸಂಸ್ಥೆಗಳನ್ನು ಕಟ್ಟಿಕೊಂಡು ಮುಖ್ಯವಾಹಿನಿಗೆ ಮುಖ ಮಾಡಿ ಸಮಾಜದ ಲೆಕ್ಕಾಚಾರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಹೇಳಿದರು.

‘ಸಕಲ ಸಮಸ್ಯೆಗಳಿಗೂ ಅನಕ್ಷರತೆಯೇ ಕಾರಣ. ಅಂಧಾನುಕರಣೆ, ಮೂಢನಂಬಿಕೆ ಹಾಗೂ ಬಡತನಗಳಿಗೆ ಅನಕ್ಷರತೆಯೇ ಮೂಲವಾಗಿದೆ. ಸಾಕ್ಷರರಿಗೆ ಮಾತ್ರ ಸಮಾಜದಲ್ಲಿ ಬೆಲೆ ಇದ್ದು, ಪ್ರತಿಯೊಂದು ಹಳ್ಳಿಗಳ ಮೂಲೆಗೂ ಅಕ್ಷರ ಜ್ಞಾನ ಪಸರಿಸಬೇಕಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಎನ್.ನಾಗರಾಜ ಮಾತನಾಡಿ, ‘ರಾಷ್ಟ್ರ, ರಾಜ್ಯಮಟ್ಟದಿಂದ ಹಿಡಿದು ಗ್ರಾಮ ಪಂಚಾಯಿತಿ ಮಟ್ಟದವರೆಗೆ ಅನಕ್ಷರಸ್ಥರನ್ನು, ಅಕ್ಷರಸ್ಥರನ್ನಾಗಿ ಪರಿವರ್ತಿಸಬೇಕು. ಗ್ರಾಮೀಣ ಮಟ್ಟದಲ್ಲಿನ ಅಲ್ಪಸಂಖ್ಯಾತರ, ಪರಿಶಿಷ್ಟ ವರ್ಗಗಳ ಮಹಿಳೆಯರ ಮತ್ತು ಪುರುಷರ ಶೈಕ್ಷಣಿಕ ಮಟ್ಟ ಸುಧಾರಣೆಗಾಗಿ ಸಾಕ್ಷರತಾ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ಹೇಳಿದರು.

ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ಹನುಮಂತಪ್ಪ, ಜಿಲ್ಲಾ ಕಾರ್ಯಕ್ರಮ ಸಹಾಯಕ ಪ್ರಸನ್ನ ಕುಮಾರ್, ಸಾಕ್ಷರತಾ ಸಂಯೋಜಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT