ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪುರಸಭೆ ಚುನಾವಣೆ ನಿರೀಕ್ಷೆಯಲ್ಲಿ ಸ್ಥಳೀಯರು’

Last Updated 17 ಸೆಪ್ಟೆಂಬರ್ 2019, 13:31 IST
ಅಕ್ಷರ ಗಾತ್ರ

ವಿಜಯಪುರ: ಮೀಸಲಾತಿ ಗೊಂದಲದಿಂದ ಹಲವು ಬಾರಿ ಮುಂದೂಡಲಾಗಿದ್ದ ಪುರಸಭೆ ಚುನಾವಣೆಗೆ ಈಗಲಾದರೂ ಮುಹೂರ್ತ ಕೂಡಿ ಬರಲಿದೆಯೇ ಎನ್ನುವ ಕಾತುರದಲ್ಲಿ ಆಕಾಂಕ್ಷಿಗಳು ಬಕಪಕ್ಷಿಗಳಂತೆ ಕಾಯುತ್ತಿದ್ದಾರೆ.

ಸ್ಥಳೀಯ ಸಂಸ್ಥೆಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಈ ಸಂಬಂಧ ಅಗತ್ಯ ಪೂರ್ವಸಿದ್ಧತೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ಇತರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪುರಸಭಾ ಚುನಾವಣೆ ದಿನಾಂಕ ಶೀಘ್ರವಾಗಿ ಘೋಷಣೆ ಆಗಬಹುದು ಎನ್ನುವ ನಿರೀಕ್ಷೆಯಲ್ಲಿ ಸ್ಥಳೀಯರು ಇದ್ದಾರೆ ಎಂದು ಮುಖಂಡ ನಂಜುಂಡಪ್ಪ ಹೇಳಿದರು.

ಸ್ಥಳೀಯ ನಿವಾಸಿ ನಾರಾಯಣಸ್ವಾಮಿ ಮಾತನಾಡಿ, 2013ರಲ್ಲಿ ಪುರಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಇಲ್ಲಿನ 23 ವಾರ್ಡ್‌ಗಳ ಪೈಕಿ ಐದು ವಾರ್ಡ್‌ಗಳಲ್ಲಿ ಪಕ್ಷೇತರರು, ಎರಡು ವಾರ್ಡ್‌ರ್ಗಳಲ್ಲಿ ಜೆಡಿಎಸ್, ಹದಿನೂರು ವಾರ್ಡ್‌ಗಳಲ್ಲಿ ಕಾಂಗ್ರೆಸ್ ಸದಸ್ಯರು ಆಯ್ಕೆಯಾಗಿದ್ದರೂ ಅಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿ ಪ್ರಕಟಣೆ ವಿಳಂಬದಿಂದ ಒಂದು ವರ್ಷದ ಅವಧಿಗೆ ಅಧ್ಯಕ್ಷರಿಲ್ಲದೆ ಆಡಳಿತಾಧಿಕಾರಿ ಉಸ್ತುವಾರಿ ಹೊತ್ತಿದ್ದರು. ಜನಪ್ರತಿನಿಧಿಗಳಿಗೆ ಒಂದು ವರ್ಷ ಹೆಚ್ಚಿನ ಕಾಲಾವಕಾಶ ಸಿಕ್ಕಿದರೂ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ನ್ಯಾಯಾಲಯದ ಮೆಟ್ಟಿಲು ಹತ್ತಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಮುಖಂಡ ರಮೇಶ್‌ಕುಮಾರ್ ಮಾತನಾಡಿ, ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿವೆ. ಜನರು ತಮ್ಮ ಸಮಸ್ಯೆ ಯಾರ ಬಳಿಯಲ್ಲಿ ಹೇಳಿಕೊಳ್ಳಬೇಕು ಎನ್ನುವ ಗೊಂದಲದಲ್ಲಿದ್ದಾರೆ. ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗುತ್ತಿಲ್ಲ. ಶಾಸಕ ನಿಸರ್ಗ ನಾರಾಯಣಸ್ವಾಮಿ ಒಂದು ದಿನವೂ ಅಧಿಕಾರಿಗಳ ಸಭೆ ಕರೆದು ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಲಿಲ್ಲ ಎಂದರು.

ಪುರಸಭೆ ಆರಂಭವಾಗಿ ನೂರು ವರ್ಷ ಕಳೆದಿದೆ. ರಾಜ್ಯಮಟ್ಟದಲ್ಲಿ ಉತ್ತಮ ಪುರಸಭೆಯೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಹಿಂದಿನ ಶಾಸಕ ಪಿಳ್ಳಮುನಿಶಾಮಪ್ಪ ತಮ್ಮ ಅವಧಿಯಲ್ಲಿ ಪುರಸಭೆ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಡೇರಲಿಲ್ಲ ಎಂದು ಹಿರಿಯರಾದ ಸೋಮಶೇಖರ್‌, ನಾಗಣ್ಣ ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT