ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಜುಲೈ 8 ರಂದು ಲೋಕ ಅದಾಲತ್‌, ಎರಡು ಲಕ್ಷ ಪ್ರಕರಣ ಇತ್ಯರ್ಥ ಗುರಿ

Published 28 ಜೂನ್ 2023, 13:54 IST
Last Updated 28 ಜೂನ್ 2023, 13:54 IST
ಅಕ್ಷರ ಗಾತ್ರ

ದೇವನಹಳ್ಳಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನ್ಯಾಯಾಲಯ ಆವರಣಗಳಲ್ಲಿ ಜುಲೈ 8 ರಂದು ಬೆಳಿಗ್ಗೆ 10 ರಿಂದ ಸಂಜೆ 5 ವರೆಗೆ ಬೃಹತ್ ಲೋಕ ಅದಾಲತ್‌ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್ ರಘುನಾಥ್ ತಿಳಿಸಿದ್ದಾರೆ.

ಕಳೆದ ಬಾರಿ ನಡೆದ ಲೋಕ ಅದಾಲತ್‌ ಎರಡು ಲಕ್ಷ ಪ್ರಕರಣ ನೋಂದಾಣಿ ಆಗಿತ್ತು. ಸುಮಾರು 1.79 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿದ್ದವು. ಈ ಬಾರಿಯೂ 2 ಲಕ್ಷ ಪ್ರಕರಣಗಳು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಪ್ರಕರಣ, ವಿದ್ಯುತ್‌ ಹಾಗೂ ನೀರಿನ ಶುಲ್ಕಗಳಿಗೆ ಸಂಬಂಧಿಸಿದ ಹಾಗೂ ವೈವಾಹಿಕ, ಕುಟುಂಬ ನ್ಯಾಯಾಲಯ ಇತರೆ ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಅದಾಲತ್‌ನಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣ, ಬ್ಯಾಂಕ್ ಪ್ರಕರಣ, ಮೋಟಾರು ಅಪಘಾತ ಪರಿಹಾರ, ಭೂಸ್ವಾಧೀನ, ಕಂದಾಯ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ, ಬಾಡಿಗೆ, ಬೋಗ್ಯ ಹಕ್ಕುಗಳಂತಹ ಪ್ರಕರಣಗಳು ಲೋಕ ಇತ್ಯರ್ಥವಾಗಲಿವೆ ಎಂದು ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿಗೆ 080-22222919 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿರಿಯ ಸಿವಿಲ್ ನ್ಯಾಯಾಧೀಶ, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT