ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ: ದೇವನಹಳ್ಳಿಯಲ್ಲಿ ಮತ ಹೆಚ್ಚಿಸಿಕೊಂಡ ಕಾಂಗ್ರೆಸ್

ಸಂದೀಪ್‌
Published 5 ಜೂನ್ 2024, 5:40 IST
Last Updated 5 ಜೂನ್ 2024, 5:40 IST
ಅಕ್ಷರ ಗಾತ್ರ

ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿಕೊಂಡರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ ಪ್ರಮಾಣ ಹೆಚ್ಚಿಕೊಂಡಿದ್ದು, 11,371 ಮತ ಮುನ್ನಡೆ ಪಡೆದುಕೊಂಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಕೆ.ಎಚ್‌.ಮುನಿಯಪ್ಪ 73,058 ಮತ ಪಡೆದು ಜಯ ಸಾಧಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಬಳ್ಳಾಪುರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯರ ಪರ 84,429 ಮತ ಪಡೆದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನ ನಿಸರ್ಗ ನಾರಾಯಣಸ್ವಾಮಿ 68,427 ಮತ ಹಾಗೂ ಬಿಜೆಪಿಯ ಪಿಳ್ಳ ಮುನಿಶಾಮಪ್ಪ 34,404 ಮತ ಪಡೆದಿದ್ದರು. ಇವರಿಬ್ಬರಿರು ಪಡೆದಿದ್ದ ಒಟ್ಟು ಮತಗಳು 1,02,231. ಆದರೆ ಈ ಗುರಿಯನ್ನು ಲೋಕಸಭಾ ಚುನಾವಣೆಯಲ್ಲಿ ಮುಟ್ಟಲು ಸಾಧ್ಯವಾಗಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ರಾಜಕೀಯ ತಂತ್ರಗಾರಿಕೆ ಫಲವಾಗಿ 11,371 ಮತಗಳನ್ನಷ್ಟೇ ಪಡೆಯಲು ಸಾಧ್ಯವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂವರು ಕಾಂಗ್ರೆಸ್‌ ಶಾಸಕರಿದ್ದರೂ ನಿರೀಕ್ಷಿತ ಮಟ್ಟದಲ್ಲಿ ರಕ್ಷಾ ರಾಮಯ್ಯರಿಗೆ ಮತದಾರರು ಬೆಂಬಲಿಸಿದಂತೆ ಕಾಣುತ್ತಿಲ್ಲ.

ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿ ಕೈಹಿಡಿಯಲಿವೆ ಎಂಬ ನಂಬಿಕೆಯಲ್ಲಿದ್ದ ಕಾಂಗ್ರೆಸ್‌ ಮುಖಂಡ‌ರ ವಿಶ್ವಾಸ ತಲೆಕೆಳಕಾಗಿದೆ.

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ವಿಧಾನಸಭಾ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತ ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪಕ್ಷ ಸಂಘಟನೆಯಲ್ಲಿ ನಿರತನಾಗುವೆ.
–ಕೆ.ಎಚ್.ಮುನಿಯಪ್ಪ, ಸಚಿವ

ಸಚಿವ ಕೆ.ಎಚ್‌.ಮುನಿಯಪ್ಪರ ತವರು ಕ್ಷೇತ್ರ ದೇವನಹಳ್ಳಿಯಲ್ಲಿ ರಾಜಕೀಯ ಲೆಕ್ಕಾಚಾರದ ನಡುವೆಯೂ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರಿಗೆ 5,231 ಮತಗಳ ಮುನ್ನಡೆ ದೊರೆತಿದೆ. ನೆಲಮಂಗಲದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಬಿಜೆಪಿ ಪಕ್ಷಕ್ಕೆ 33,255 ಮತ ಮುನ್ನಡೆ ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ.

ಹೊಸಕೋಟೆಯಲ್ಲಿ ಕಾಂಗ್ರೆಸ್‌ ಮತ ಕ್ಷೀಣ

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ಶಾಸಕ ಶರತ್‌ ಬಚ್ಚೇಗೌಡ ಅವರು ಪ್ರಬಲ ಪ್ರತಿಸ್ಪರ್ಧಿ ಎಂಟಿಬಿ ನಾಗರಾಜ್‌ ವಿರುದ್ಧ 5075 ಮತಗಳ ಅಂತರದಿಂದ ವಿಜಯ ಸಾಧಿಸಿದ್ದರೂ ಆದರೆ ಲೋಕಸಭಾ ಚುನಾವಣೆಯಲ್ಲಿ ಈ ಅಂತರದ ಮತಗಳು ಕಡಿತವಾಗಿದೆ. ಸುಧಾಕರ್‌ ವಿರುದ್ಧ ರಕ್ಷಾ ರಾಮಯ್ಯರಿಗೆ ಕೇವಲ 2885 ಮತಗಳ ಲೀಡ್‌ ಮಾತ್ರವೇ ಹೊಸಕೋಟೆಯ ಕಾಂಗ್ರೆಸ್‌ ಮುಖಂಡರು ನೀಡುವಲ್ಲಿ ಸಫಲರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT