ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಗೆಲುವಿನತ್ತ ಚಿತ್ತ ಇರಲಿ: ಧೀರಜ್ ಮುನಿರಾಜು

Published 7 ಜನವರಿ 2024, 6:15 IST
Last Updated 7 ಜನವರಿ 2024, 6:15 IST
ಅಕ್ಷರ ಗಾತ್ರ

ದೇವನಹಳ್ಳಿ: ಪ್ರಧಾನಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿರುವ ಶ್ರಮಕ್ಕೆ ಪ್ರತಿಫಲವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವತ್ತ ನಮ್ಮೆಲ್ಲರ ಚಿತ್ತ ಇರಲಿ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಹೇಳಿದರು.

ತಾಲ್ಲೂಕಿನ ಮಾಳಿಗಾನಹಳ್ಳಿಯಲ್ಲಿ ಶನಿವಾರ ನೂತನ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.

ರಾಜ್ಯದ ರೈತರು, ಬಡವರು, ಹಿಂದುಳಿದ ವರ್ಗದವರ ಸರ್ವತೋಮುಖ ಅಭಿವೃದ್ಧಿಗೆ ಒಗ್ಗೂಡಿ ಶ್ರಮಿಸಿದಾಗ ಮಾತ್ರ ಅಭಿವೃದ್ಧಿಯೆಡೆಗೆ ರಾಜ್ಯ ಸಾಗಲಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ಆತ್ಮನಿರ್ಭರ ಭಾರತ ಕಲ್ಪನೆ ಅಡಿಯಲ್ಲಿ ಭಾರತದ ಪ್ರತಿಯೊಬ್ಬರೂ ಸ್ವಾಲಂಬಿಯಾಗಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಕಂಡಕ್ಟರ್ ನಾರಾಯಣಸ್ವಾಮಿ, ಶಿವುಪ್ರಸಾದ್, ದೇ.ಸು.ನಾಗರಾಜ್, ಅಂಬರೀಶ ಗೌಡ, ಎಚ್.ಎಂ ರವಿಕುಮಾರ್, ಸುಂದರೇಶ್, ಮಂಜುನಾಥ್, ವಿನೋದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT