ಆನೇಕಲ್: ಪಟ್ಟಣದ ಹೊಸೂರು ರಸ್ತೆಯಲ್ಲಿ ಸೋಮವಾರ ಸಂಜೆ ಟಿಪ್ಪರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆನೇಕಲ್‌ನ ರಹಮತ್ ಉಲ್ಲಾ(57) ಮೃತರು.
ದ್ವಿಚಕ್ರ ವಾಹನದಲ್ಲಿ ರಹಮತ್ ಉಲ್ಲಾ ಅವರು ಹೊಸೂರು ಕಡೆ ಹೊರಟಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದರಿಂದ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಲಾರಿಯ ಚಕ್ರಕ್ಕೆ ಸಿಲುಕಿದ್ದರಿಂದ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.