ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಯಂತ್ರೋಪಕರಣ ಕಳವು

Last Updated 19 ಸೆಪ್ಟೆಂಬರ್ 2020, 2:06 IST
ಅಕ್ಷರ ಗಾತ್ರ

ಚನ್ನಪಟ್ಟಣ: ಪಟ್ಟಣದ ಲೋಕೋಪಯೋಗಿ ಇಲಾಖೆ ಉಪವಿಭಾಗ ಕಚೇರಿಗೆ ಗುರುವಾರ ರಾತ್ರಿ ನುಗ್ಗಿರುವ ಕಳ್ಳರು ಸಾವಿರಾರು ಮೌಲ್ಯದ ಯಂತ್ರೋಪಕರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಕಚೇರಿ ಹಿಂಬದಿ ಬಾಗಿಲು ಒಡೆದಿರುವ ಕಳ್ಳರು ಅಲ್ಲಿದ್ದ ಕಂಪ್ಯೂಟರ್, ಲ್ಯಾಪ್ ಟಾಪ್ ಇತರ ಉಪಕರಣ ಸೇರಿ ಸುಮಾರು ₹50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.

ಈ ಬಗ್ಗೆ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪರಾಧ ವಿಭಾಗದ ಸಬ್ ಇನ್ ಸ್ಪೆಕ್ಟರ್ ಗಂಗಾಧರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರೀಕ್ಷೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT