ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಫೆ.29 ರಂದು ಮಹರ್ಷಿ ವಾಲ್ಮೀಕಿ ದೇಗುಲ ಉದ್ಘಾಟನೆ

Published 27 ಫೆಬ್ರುವರಿ 2024, 13:36 IST
Last Updated 27 ಫೆಬ್ರುವರಿ 2024, 13:36 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಪಟ್ಟಣದ ಬಸ್ ನಿಲ್ದಾಣದ ಬಳಿ ಮಂಡಿಬೆಲೆ ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ಉದ್ಯಾನವನದಲ್ಲಿ ನವೀಕರಣಗೊಂಡಿರುವ ಮಹರ್ಷಿ ವಾಲ್ಮೀಕಿ ದೇವಾಲಯದ ಉದ್ಘಾಟನೆ ಫೆ.29 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ದೇವಸ್ಥಾನ ಉದ್ಘಾಟಿಸಲಿದ್ದು,  ಮಹರ್ಷಿ ವಾಲ್ಮೀಕಿ ಗುರುಪೀಠಾಧ್ಯಕ್ಷ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸಚಿವ ಸತೀಶ್ ಜಾರಕಿಹೋಳಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಪುರಸಭೆ ಅಧ್ಯಕ್ಷೆ ವಿಮಲಾಬಸವರಾಜ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎಲ್. ಶ್ರೀರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT