ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಯೋಜನೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಪ್ರಶಸ್ತಿ

Last Updated 17 ಮಾರ್ಚ್ 2023, 7:26 IST
ಅಕ್ಷರ ಗಾತ್ರ

ದೇವನಹಳ್ಳಿ: ಪ್ರಸಕ್ತ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಾಯಿತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.

ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ರವಿ ಎಂ. ತಿರ್ಲಾಪುರ ತಿಳಿಸಿದ್ದಾರೆ.

ಬೆಂಗಳೂರು ಜಿಲ್ಲಾ ಪಂಚಾಯಿತಿಯು ಅತ್ಯುತ್ತಮ ಜಿ.ಪಂ. ಪ್ರಶಸ್ತಿ ಹಾಗೂ ₹ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ. ಅತ್ಯುತ್ತಮ ತಾ.ಪಂ. ಪ್ರಶಸ್ತಿ ಹಾಗೂ
₹ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯಿತಿಯು ಅತ್ಯುತ್ತಮ ಗ್ರಾ.ಪಂ. ಪ್ರಶಸ್ತಿ ಹಾಗೂ ₹ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿದೆ.

ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ., ಅತ್ಯುತ್ತಮ ತಾಲ್ಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯಿತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ. ಪ್ರಶಸ್ತಿ ಪಡೆದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT