ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಕಿಸಾನ್ ದಿನಾಚರಣೆ

Last Updated 20 ಅಕ್ಟೋಬರ್ 2020, 2:52 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಹಿಳಾ ಕಿಸಾನ್ ದಿನಾಚರಣೆ ಕಾರ್ಯಕ್ರಮ ನಡೆಯಿತು.

‘ಕೃಷಿಯಲ್ಲಿ ಮಹಿಳೆಯರ ಪಾತ್ರದ ಮಹತ್ವ’ ಕುರಿತು ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಚಿತ್ರಾ, ‘ಬೇಸಾಯದ ಪ್ರತಿಯೊಂದು ಹಂತದಲ್ಲಿಯೂ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಕೃಷಿಯ ವಿವಿಧ ಸೌಲಭ್ಯವನ್ನು ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕಿದೆ’ ಎಂದು ಸಲಹೆ ನೀಡಿದರು.

ಕೃಷಿ ಉಪ ಕಸುಬುಗಳಲ್ಲಿಯೂ ಮಹಿಳೆಯರೇ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ. ರೈತ ಮಹಿಳೆಯರನ್ನು ಗೌರವಿಸುವ ನಿಟ್ಟಿನಲ್ಲಿ ರೈತ ಮಹಿಳಾ ದಿನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಮಹಿಳೆಯರು ಕೃಷಿಯೇತರ ಚಟುವಟಿಕೆಗಳಾದ ಕೋಳಿ, ಕುರಿ ಸಾಕಾಣಿಕೆ, ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ರೈತ ಮಹಿಳೆಯರಿಗೆ ಮೌಲ್ಯವರ್ಧಿತ ರಾಗಿ ಉತ್ಪನ್ನಗಳಾದ ಚಕ್ಕುಲಿ, ಲಡ್ಡು, ಬಿಸ್ಕೆಟ್‌ ತಯಾರಿಕೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ದೀಪಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT