ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೇಜರ್ ಧ್ಯಾನ್ ಚಂದ್ ಜನ್ಮ ದಿನ: ಬೆಟ್ಟಕೋಟೆಯಲ್ಲಿ ಹಾಕಿ ಪಂದ್ಯಾವಳಿ 

Published 29 ಆಗಸ್ಟ್ 2024, 16:04 IST
Last Updated 29 ಆಗಸ್ಟ್ 2024, 16:04 IST
ಅಕ್ಷರ ಗಾತ್ರ

ದೇವನಹಳ್ಳಿ: ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ತಾಲ್ಲೂಕಿನ ಬೆಟ್ಟಕೋಟೆ ಗ್ರಾಮದ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಪುರುಷ ಮತ್ತು ಮಹಿಳೆಯರ ಹಾಕಿ ಪಂದ್ಯಾವಳಿ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಟ್ಟಕೋಟೆ ಗ್ರಾಮ ಪಂಚಾಯತಿ ಮತ್ತು ರಾಮಕೃಷ್ಣ ಗ್ರಾಮಾಂತರ ಪ್ರೌಢ ಶಾಲೆ ಸಹಯೋಗದಲ್ಲಿ ಏರ್ಪಡಿಸಿದ್ದ ಪಂದ್ಯಾವಳಿಯನ್ನು ಜಿ.ಪಂ ಆರೋಗ್ಯ, ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಲಕ್ಷ್ಮಿ ನಾರಾಯಣಪ್ಪ ಉದ್ಘಾಟಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ, ಸ್ಥಳೀಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆಂಪರಾಜು, ಅಶ್ವಥ್ ನಾರಾಯಣ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು, ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT