ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಿ’

Last Updated 23 ಜನವರಿ 2019, 13:36 IST
ಅಕ್ಷರ ಗಾತ್ರ

ದೇವನಹಳ್ಳಿ: 'ಸಮಾಜದ ಸ್ವಾಸ್ಯ ಕಾಪಾಡುವಿಕೆಗೆ ತಂಬಾಕು ಮಾರಕವಾಗಿದೆ ಹಾಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ರಮ್ಯ ತಿಳಿಸಿದರು.

ಬೀರಸಂದ್ರದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಶಾಲಾ-ಕಾಲೇಜುಗಳು, ಆಸ್ಪತ್ರೆಗಳು, ಸಾರ್ವಜನಿಕ ಸ್ಥಳಗಳು ಹಾಗೂ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ದುಷ್ಪರಿಣಾಮ ಕುರಿತು ಕೋಟ್ಪಾ - 2003ರ ಸೆಕ್ಷನ್ - 4 ರಂತೆ ನಿಗದಿತ ಸ್ಥಳದಲ್ಲಿ ನಾಮಫಲಕ ಕಡ್ಡಾಯವಾಗಿ ಅಳವಡಿಸಬೇಕು. ಜತೆಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

‘ಅಂಗಡಿ ಪರವಾನಗಿ ಮತ್ತು ನವೀಕರಣ ನೀಡುವ ಸಂದರ್ಭದಲ್ಲಿ ಕೋಟ್ಪಾ - 2003ರ ಸೆಕ್ಷನ್ ನಾಲ್ಕು, ಐದು, ಆರು, ಏಳರ ಅನ್ವಯ ಕಡ್ಡಾಯವಾಗಿ ನಾಮಫಲಕ ಹಾಕುವಂತೆ ಅಂಗಡಿ ಮಾಲೀಕರಿಗೆ ತಿಳಿಸಬೇಕು. ನಿಯಮ ಪಾಲಿಸದ ಅಂಗಡಿ ಮಾಲೀಕರಿಗೆ ದಂಡ ವಿಧಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

‘ಶಾಲೆಯ 100 ಗಜಗಳ ಅಂತರದಲ್ಲಿ ತಂಬಾಕು ಮುಕ್ತ ಪರಿಸರ ನಿರ್ಮಾಣ ಮಾಡಬೇಕು. ಶಾಲೆಗಳಲ್ಲಿ ಶಾಲಾ ಅಭಿವೃದ್ಧಿ ಸಮಿತಿ(ಎಸ್.ಡಿ.ಎಂ.ಸಿ) ಮುಖಾಂತರ ಸೆಕ್ಷನ್-6(ಬಿ) ಕಾಯ್ದೆಯನ್ನು ಅನುಷ್ಠಾನಗೊಳಿಸಬೇಕು’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೀಶ್‌ಗೌಡ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಬಿ.ಧರ್ಮೇಂದ್ರ. ಜಿಲ್ಲಾ ಸಲಹೆಗಾರರಾದ ಡಾ.ಪಿ.ಎಸ್.ವಿದ್ಯಾರಾಣಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT