ಶುಕ್ರವಾರ, ಅಕ್ಟೋಬರ್ 18, 2019
28 °C

ಮಲ್ಲಾತಹಳ್ಳಿ ಎಂಪಿಸಿಎಸ್‌ಗೆ ₹ 2.17 ಲಕ್ಷ ನಿವ್ವಳ ಲಾಭ

Published:
Updated:
Prajavani

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಲ್ಲಾತಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಸಂಘದ ಆವರಣದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ಈ ಸಾಲಿನಲ್ಲಿ ಸಂಘವು ₹2.17 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಹಾಲಿನ ಬಿಲ್‍ಗಳಿಗೆ ಅನುಸಾರವಾಗಿ ₹100ಗಳಿಗೆ ₹2.19 ಬೋನಸ್ ನೀಡಲಾಗುತ್ತಿದೆ. ಸಂಘದ ಸಾಧನೆ ಮುಂದುವರೆಯಬೇಕಾದರೆ ಸದಸ್ಯರು ಗುಣಮಟ್ಟದ ಹಾಲನ್ನು ಸರಬರಾಜು ಮಾಡಿ ಸಂಘದ ಏಳಿಗೆಗೆ ಶ್ರಮಿಸಬೇಕು ಎಂದರು.

ಸಭೆಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಎಂ.ಸಿ.ಆನಂದಮೂರ್ತಿ ಸಂಘದ ನಿರ್ದೇಶಕರು ಹಾಗೂ ಸದಸ್ಯರು ಹಾಜರಿದ್ದರು.

Post Comments (+)