ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂದಿನ ವರ್ಷ ಗುರುಭವನದಲ್ಲೇ ಶಿಕ್ಷಕರ ದಿನ: ಮಾಲೂರು ಶಾಸಕ ಕೆ.ವೈ.ನಂಜೇಗೌಡ

Published 5 ಸೆಪ್ಟೆಂಬರ್ 2024, 14:09 IST
Last Updated 5 ಸೆಪ್ಟೆಂಬರ್ 2024, 14:09 IST
ಅಕ್ಷರ ಗಾತ್ರ

ಮಾಲೂರು: ತ್ವರಿತವಾಗಿ ಗುರುಭವನ ನಿರ್ಮಾಣಕ್ಕೆ ಕ್ರಮವಹಿಸಲಾಗಿದ್ದು, ಮುಂದಿನ ವರ್ಷ ಗುರುಭವನದಲ್ಲಿ ಶಿಕ್ಷಕರ ದಿನ ಆಚರಿಸಲಾಗುವುದು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.

ತಾಲ್ಲೂಕು ಆಡಳಿತ ಗುರುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಭಾಪುಲೆ ದಂಪತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಮಾತನಾಡಿದರು.

ಸೆ.5ರಂದು ಸಂಕೇತವಾಗಿ ಶಿಕ್ಷಕರ ದಿನ ಆಚರಿಸಲಾಗುತ್ತಿದ್ದು, ಸೆ.9 ರಂದು ವಿಶೇಷವಾಗಿ ಆಚರಿಸಲಾಗುವುದು ಎಂದರು.

ಶಿಕ್ಷಕರು ಪಠ್ಯದ ಜೊತೆ ನೈತಿಕ ಮತ್ತು ಮಾನವೀಯ ಮೌಲ್ಯವನ್ನು ಬೋಧಿಸುತ್ತಾರೆ. ಇವು ವಿದ್ಯಾರ್ಥಿಗಳನ್ನು ಯಶಸ್ಸಿನತ್ತ ಕೊಂಡೊಯ್ಯುವ ದೀಪವಾಗಿದೆ ಎಂದು ತಿಳಿಸಿದರು.

ತಹಶೀಲ್ದಾರ್‌ ರಮೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮುನೇಗೌಡ, ನೊಸಗೆರೆ ಗ್ರಾ.ಪಂ ಅಧ್ಯಕ್ಷ ವಿನಯ್, ಮುಖಂಡ ಹನುಮಂತರೆಡ್ಡಿ, ಪುರಸಭೆ ಸದಸ್ಯ ಇಮ್ತಿಯಾಜ್, ವಕೀಲ ಬಾಬು, ಶಿಕ್ಷಕರಾದ ವೆಂಕಟಸ್ವಾಮಿ, ಶಶಿಧರ್‌, ಕಾಕಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT