ದೊಡ್ಡಬಳ್ಳಾಪುರ: ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಪ್ರಕರಣ ತಾಲ್ಲೂಕಿನ ಹಾಡೋನಹಳ್ಳಿ ಸಮೀಪ ಮಂಗಳವಾರ ನಡೆದಿದೆ. ಮೃತರು ಹಾಡೋನಹಳ್ಳಿ ಗ್ರಾಮದ ದೇವರಾಜ್ (44) ಎಂದು ಗುರುತಿಸಲಾಗಿದೆ.
ಘಾಟಿ ಸುಬ್ರಹ್ಮಣ್ಯ ದೇವಾಲಯದ ಕಡೆಯಿಂದ ವೇಗವಾಗಿ ಬಂದ ಕಾರು ಹಾಡೋನಹಳ್ಳಿ ಸಮೀಪ ವ್ಯವಸಾಯ ಸೇವಾ ಸಹಕಾರ ಸಂಘದ ಕಟ್ಟಡ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ.ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.