ದೊಡ್ಡಬಳ್ಳಾಪುರ: ತಾಲ್ಲೂಕಿನ ಉಜ್ಜನಿ ಗ್ರಾಮದ ಹಾಲಿನ ಡೇರಿ ಸಮೀಪ ನಿರ್ಮಿಸಿರುವ ಚೆಕ್ ಡ್ಯಾಂಗೆ ಬಿದ್ದು ಚಂದ್ರಶೇಖರ್(45) ಎಂಬುವರು ಮೃತಪಟ್ಟಿದ್ದಾರೆ.
ಪ್ರತಿದಿನ ಇದೇ ಚೆಕ್ ಡ್ಯಾಂ ಬಳಿ ಕುಳಿತು ಗಾಳದಲ್ಲಿ ಮೀನು ಹಿಡಿಯುತ್ತಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಡ್ಯಾಂನಲ್ಲಿ ಹೆಚ್ಚಿನ ನೀರು ಹಾಗೂ ಹೂಳು ಇದ್ದು, ಈ ಹೂಳಿನಲ್ಲಿ ಸಿಲುಕಿ ಮೃತಪಟ್ಟಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.