ಶನಿವಾರ, ಜುಲೈ 24, 2021
23 °C

ವಿಜಯಪುರ: ಮುಂಜಾಗ್ರತೆ ನಡುವೆ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೋವಿಡ್-19 ಸೋಂಕಿನಿಂದ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಬರೆಯಲು ಗುರುವಾರ ಬೆಳಗ್ಗೆ 8.30ಕ್ಕೆ ಪರೀಕ್ಷಾ ಕೇಂದ್ರಗಳಿಗೆ ಬಂದಿದ್ದ ವಿದ್ಯಾರ್ಥಿಗಳನ್ನು ಆರೋಗ್ಯ ಸಹಾಯಕಿಯರಿಂದ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಕೈಗೆ ಸ್ಯಾನಿಟೈಸರ್ ಹಾಕಿ ಒಳ ಬಿಡಲಾಯಿತು.

ಇಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಮೂರು ದಿನಗಳ ಮುಂಚೆಯೇ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ, ಕೋವಿಡ್-19 ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು.

ಬೆಳಗ್ಗೆ 10.15 ರಿಂದ 1.30ರವರೆಗೂ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳ ಸುತ್ತಲೂ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ 144 ಸೆಕ್ಷನ್ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷೆಗೆ ಮುಗಿದ ನಂತರ ವಿದ್ಯಾರ್ಥಿಗಳನ್ನು ಅಂತರ ಕಾಪಾಡಿಕೊಂಡು ಹೊರಗೆ ಬಿಡಲಾಯಿತು. 370 ಮಂದಿ ವಿದ್ಯಾರ್ಥಿಗಳ ಪೈಕಿ 346 ಮಂದಿ ವಿಜಯಪುರದವರು, 24 ಮಂದಿ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಅಂತರ ಕಾಪಾಡದ ವಿದ್ಯಾರ್ಥಿಗಳು: ಪರೀಕ್ಷಾ ಕೇಂದ್ರದ ಸಮೀಪದಲ್ಲಿ ಬೆಳಿಗ್ಗೆ ಜಮಾಯಿಸಿದ್ದ ವಿದ್ಯಾರ್ಥಿಗಳು, ಗುಂಪಾಗಿ ಕುಳಿತುಕೊಂಡು ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು. ಕೆಲವು ಸ್ನೇಹಿತರೊಂದಿಗೆ ಚರ್ಚೆ ಮಾಡುವಲ್ಲಿ ನಿರತರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು