ಭಾನುವಾರ, ಮಾರ್ಚ್ 29, 2020
19 °C

ದುಬಾರಿ ಬೆಲೆಗೆ ಮಾಸ್ಕ್ ಮಾರಾಟ: ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸಾರ್ವನಿಕರಿಗೆ ಇರುವ ಭಯವನ್ನು ಬಂಡವಾಳ ಮಾಡಿಕೊಂಡ ಕೆಲವು ಮೆಡಿಕಲ್ ಸ್ಟೋರ್ ಮಾಲೀಕರು ಮುಖಗವುಸುಗಳನ್ನು (ಮಾಸ್ಕ್) ನಿಗದಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಪಟ್ಟಣದ ಕೆಲವು ಅಂಗಡಿಗಳ ಮೇಲೆ ಗುರುವಾರ ದಾಳಿ ನಡೆಸಿ ದಂಡ ವಿಧಿಸಿದರು.

ಜಿಲ್ಲಾ ಸಹಾಯಕ ಔಷಧ ನಿಯಂತ್ರಕರು ಮತ್ತು ಕಾನೂನು ಮಾಪನ ಶಾಸ್ತ್ರ ವಿಭಾಗದ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದರು. ಮಾಸ್ಕ್ ಮೂಲದರಕ್ಕಿಂತ ಹತ್ತು ಪಟ್ಟು ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿರುವುದರ ಬಗ್ಗೆ ಮಾಹಿತಿ ಪಡೆದು ಈ ದಾಳಿ ನಡೆಸಿ ದಂಡ ವಿಧಿಸುತ್ತಿರುವುದಾಗಿ ಅವರು ತಿಳಿಸಿದರು.

‘ಮುಖಗವಸುಗಳಿಗೆ ದುಬಾರಿ ಬೆಲೆ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿ ಬರುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಸಿಇಒ ಅವರು ಎಚ್ಚರಿಕೆ ನೀಡಿದ್ದರೂ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದೇವೆ. ಕೆಲವರು ಖಾಸಗಿಯಾಗಿಯೂ ಮಾಸ್ಕ್ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಅವರ ಮೇಲೂ ಕ್ರಮ ಕೈಗೊಳ್ಳಲಾಗುವುದು’ ಎಂದರು.

ದಾಳಿಯಲ್ಲಿ ಮೂರು ಮೆಡಿಕಲ್ ಸ್ಟೋರ್ ಗಳಿಗೆ ತಲಾ ₹ 5 ಸಾವಿರ ದಂಡವನ್ನು ಸ್ಥಳದಲ್ಲೆ ವಿಧಿಸಿ, ಮುಂದೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂಗಡಿ ಅನುಮತಿ ರದ್ದುಪಡಿಸುವ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು