ಶುಕ್ರವಾರ, ಜೂನ್ 25, 2021
25 °C

ಸಚಿವರಿಂದ ಆಸ್ಪತ್ರೆಗೆ ವೈದ್ಯಕೀಯ ಪರಿಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ‘ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಸಹಕಾರಿಯಾಗುವ ಉದ್ದೇಶದಿಂದ ₹5 ಲಕ್ಷ ಮೌಲ್ಯದ ವೈದ್ಯಕೀಯ ಪರಿಕರಗಳನ್ನು ನೀಡುತ್ತಿದ್ದೇನೆ’ ಎಂದು ಪೌರಾಡಳಿತ ಮತ್ತು ಸಕ್ಕರೆ ಖಾತೆ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗಿದ್ದು ಸರ್ಕಾರಿ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಆಸ್ಪತ್ರೆಯ ಮೇಲ್ವಿಚಾರಕರ ಅಪೇಕ್ಷೆಯಂತೆ ತಮ್ಮ ಸ್ವಂತ ಖರ್ಚಿನಲ್ಲಿ ಆಸ್ಪತ್ರೆಗೆ 11 ಆಮ್ಲಜನಕದ ಹಾಸಿಗೆಗಳನ್ನು ನೀಡುತ್ತಿರುವುದಾಗಿ ಸಚಿವರು ತಿಳಿಸಿದರು.

‘ಲಾಕ್‌ಡೌನ್ ಮುಂದುವರಿಕೆಯ ಬಗ್ಗೆ ಮುಖ್ಯಮಂತ್ರಿಯವರು ತೀರ್ಮಾನ ತೆಗೆದುಕೊಂಡಿದ್ದಾರೆ. ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿಯೂ ಲಾಕ್‌ಡೌನ್ ಮುಂದುವರೆಯಬೇಕು. ಜೊತೆಗೆ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳೂ ಲಾಕ್‌ಡೌನ್ ಪಾಲಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮೇಲ್ವಿಚಾರಕರಾದ ಡಾ. ಸತೀಶ್, ನಗರಸಭಾಧ್ಯಕ್ಷ ಅರುಣ್ ಕುಮಾರ್‍, ಆಸ್ಪತ್ರೆಯ ಮೇಲ್ವಿಚಾರಣಾ ಸಮಿತಿ ಸದಸ್ಯ ಬಾಲಚಂದ್ರ, ಜಿಲ್ಲಾ ಪಂಚಾಯಿತಿ ಸದಸ್ಯ ನಾಗರಾಜ್ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.