ಬುಧವಾರ, ಮಾರ್ಚ್ 29, 2023
26 °C

ದೇವನಹಳ್ಳಿ: ಮುಖ್ಯ ಚುನಾವಣಾಧಿಕಾರಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿರುವ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ ಕಟ್ಟಡಕ್ಕೆ ಬುಧವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವ್ ಕುಮಾರ್ ಮತ್ತು ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ನಿತೇಶ್ ವ್ಯಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಕಟ್ಟಡದ ಆವರಣದಲ್ಲಿ ಗಿಡ ನೆಟ್ಟು ನೀರೆರದರು. ಚುನಾವಣಾ ಆಯೋಗದ ಜಂಟಿ ಆಯುಕ್ತ ರಾಘವೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ ಕೆ. ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ರಾಜೀವಲೋಚನ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು