ಮಂಗಳವಾರ, ಮಾರ್ಚ್ 28, 2023
32 °C

ದೇವಾಲಯದ ಪುನರ್‍ ನಿರ್ಮಾಣಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಚೋಳರ ಕಾಲದ ಸುಮಾರು 500 ವರ್ಷಗಳ ಹಳೆಯದಾದ ಆಂಜನೇಯ ಸ್ವಾಮಿಯ ದೇವಾಲಯ ಪುನರ್‌ನಿರ್ಮಾಣ ಮಾಡಬೇಕು ಎಂದು ಕೋರಿ ಹಿಂದೂ ರಕ್ಷಣಾ ವೇದಿಕೆಯ ಸದಸ್ಯರು ಹಾಗೂ ಗ್ರಾಮದ ಮುಖಂಡ ಜನಾರ್ದನ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್‌ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಮನವಿ ಸಲ್ಲಿಸಿದರು.

ಇಲ್ಲಿ ದೇವಾಲಯ ಇದ್ದ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಮತ್ತು ಮುಜರಾಯಿ ಇಲಾಖೆಗಳಲ್ಲಿ ದಾಖಲೆಗಳಿವೆ. ಅದನ್ನು ಪುನರ್‌ ನಿರ್ಮಿಸಲು ಅವಕಾಶ ಕೋರಿ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕರನ್ನು ಭೇಟಿ ಮಾಡಿದ ಕಾರ್ಯಕರ್ತರು ಊರಿನಲ್ಲಿದ್ದ ಪುರಾತನ ದೇವಾಲಯವನ್ನು ಕೆಲವರು ಕಳೆದ 22 ವರ್ಷಗಳ ಹಿಂದೆ ಜೀಣೋದ್ಧಾರ ಮಾಡಲು ಕೆಡವಿದ್ದು ಇಂದಿಗೂ ಅದರ ಪುನರ್‌ ನಿರ್ಮಾಣ ಆಗಿಲ್ಲದ ಕಾರಣ ತಾವು ಕೂಡಲೇ ಇದರ ಬಗ್ಗೆ ತನಿಖೆ ನಡೆಸಿ ದೇವಾಲಯವನ್ನು ನಿರ್ಮಿಸಲು ಅವಕಾಶ ಮಾಡಿಸಿಕೊಡಬೇಕು ಎಂದು ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು