ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ | ರಾಗಿ ಖರೀದಿ ನೋಂದಣಿ ಶೀಘ್ರವೇ ಆರಂಭ: ಜಿಲ್ಲಾಧಿಕಾರಿ

Published 14 ಡಿಸೆಂಬರ್ 2023, 14:32 IST
Last Updated 14 ಡಿಸೆಂಬರ್ 2023, 14:32 IST
ಅಕ್ಷರ ಗಾತ್ರ

ದೇವನಹಳ್ಳಿ: ಇನ್ನೂ ಎರಡು ಮೂರು ದಿನಗಳಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್‌. ಶಿವಶಂಕರ ತಿಳಿಸಿದ್ದಾರೆ.

2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನೋಂದಣಿಯನ್ನು ಡಿಸೆಂಬರ್ 1 ರಿಂದ ಆರಂಭಿಸಲಾಗುವುದೆಂದು ತಿಳಿಸಲಾಗಿತ್ತು. ಸರ್ಕಾರವು ಇದೇ ಮೊದಲ ಬಾರಿಗೆ ರೈತರಿಂದ ಬೆರಳಚ್ಚು ಪಡೆದು ನೋಂದಣಿ ಮಾಡಿಕೊಳ್ಳಲು ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದ್ದು, ಇದರ ಪರಿಶೀಲನೆಯು ಅಂತಿಮ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ತಂತ್ರಾಂಶವು ಮುಂದಿನ ಎರಡು ಮೂರು ದಿನಗಳಲ್ಲಿ ಕಾರ್ಯ ನಿರ್ವಹಿಸಲು ಲಭ್ಯವಾಗಲಿದ್ದು, ಶೀಘ್ರದಲ್ಲಿಯೇ ರೈತರ ನೋಂದಣಿಯನ್ನು ಆರಂಭಿಸಲಾಗುವುದು. ಹೀಗಾಗಿ ರೈತರು ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT