ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ | ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು: ಗ್ರಾಮಸ್ಥರ ಪ್ರತಿಭಟನೆ

Published 23 ಜನವರಿ 2024, 6:17 IST
Last Updated 23 ಜನವರಿ 2024, 6:17 IST
ಅಕ್ಷರ ಗಾತ್ರ

ಹೊಸಕೋಟೆ: ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಅಳವಡಿಸಿದ್ದ ರಾಮನ ಫ್ಲೆಕ್ಸ್‌ ಅನ್ನು ಸೋಮವಾರ ಸಂಜೆ ಕಿಡಿಗೇಡಿಗಳು  ಹರಿದ ಪರಿಣಾಮ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನದ ವಾತಾವರಣ ನಿರ್ಮಾಣವಾಗಿತ್ತು.

ಕಿಡಿಗೇಡಿಗಳನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟಿಸಿದ ಶ್ರೀರಾಮ ಭಕ್ತರು.
ಕಿಡಿಗೇಡಿಗಳನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟಿಸಿದ ಶ್ರೀರಾಮ ಭಕ್ತರು.

ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಸೂಲಿಬೆಲೆ ವೃತ್ತ ನಿರೀಕ್ಷಕ ರವಿ, ನಂದಗುಡಿ ವೃತ್ತ ನಿರೀಕ್ಷಕ ದಿವಾಕರ್ ಗ್ರಾಮಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT