ಆನೇಕಲ್ : ಪಟ್ಟಣದ ಡಾ.ಎಸ್.ಗೋಪಾಲರಾಜು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಮತ್ತು ಎನ್‌ಎಸ್‌ಎಸ್ ಚಟುವಟಿಕೆಗಳನ್ನು ಶಾಸಕ ಬಿ.ಶಿವಣ್ಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಆನೇಕಲ್ ತಾಲ್ಲೂಕಿನಲ್ಲಿ ಪಟ್ಟಣದ ಗೋಪಾಲರಾಜು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಏಕೈಕ ಸರ್ಕಾರಿ ಪದವಿ ಕಾಲೇಜು ಆಗಿರುವುದರಿಂದ ಒತ್ತಡ ಹೆಚ್ಚಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಎರಡು ಹೋಬಳಿಗಳಲ್ಲಿ ಪದವಿ ಕಾಲೇಜು ಪ್ರಾರಂಭಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಗೋಪಾಲರಾಜು ಪದವಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಿ ಬಿಎಸ್ಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹಾಗಾಗಿ ಪ್ರತಿಯೊಬ್ಬರು ಶಿಕ್ಷಣ ಪಡೆಯುವಂತಾಗಬೇಕು. ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚು ಮಾಡುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ. ಹಾಗಾಗಿ ಈ ಸೌಲಭ್ಯ ಪಡೆದುಕೊಂಡು ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆಯುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದರು.

ಐಎಎಸ್, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪದವಿ ಕಾಲೇಜುಗಳಲ್ಲಿ ಪೂರಕ ತರಬೇತಿ ನೀಡುವ ಅವಶ್ಯಕತೆಯಿದೆ. ಇದರಿಂದಾಗಿ ಗ್ರಾಮೀಣ ಭಾಗದ ಹೆಚ್ಚು ವಿದ್ಯಾರ್ಥಿಗಳು ಉನ್ನತ ಉದ್ಯೋಗಗಳಿಗೆ ತೆರಳಲು ಅನುಕೂಲವಾಗುತ್ತದೆ ಎಂದರು.

ಪುರಸಭೆ ಸದಸ್ಯರಾದ ಎನ್.ಎಸ್.ಪದ್ಮನಾಭ, ರಾಜೇಂದ್ರ ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಗೌಡ, ಗೋಪಾಲರಾಜು ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.