ಶುಕ್ರವಾರ, ಏಪ್ರಿಲ್ 10, 2020
19 °C

‘ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಹಿಂದಿನ ಸರ್ಕಾರದ ಚಿಂತನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಚಿಂತನೆಯು ಹಿಂದಿನ ಕಾಂಗ್ರೆಸ್‌– ಜೆಡಿಎಸ್‌ ಸಮ್ಮಿಶ್ರ ಸರ್ಕಾರದ್ದಾಗಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಶ್ವದ ವಿದ್ಯಮಾನವನ್ನು ತಿಳಿದುಕೊಳ್ಳುವುದರಿಂದ ವಿದ್ಯಾರ್ಥಿಗಳ ಜ್ಞಾನ ವಿಕಾಸವಾಗುತ್ತದೆ. ಅಂತರ್ಜಾಲದ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು. 

ಮಾನವಿಕ ಅಧ್ಯಯನ ವಿಷಯಗಳು, ವಿಜ್ಞಾನ ಮತ್ತು ತಂತ್ರಜ್ಞಾನದ ಮಾಹಿತಿಯನ್ನು ಪಡೆಯುವುದರ ಮೂಲಕ ವಿದ್ಯಾರ್ಥಿಗಳು ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಪಠ್ಯವಿಷಯದ ಆಚೆಗೆ ನಡೆಯುತ್ತಿರುವ ವರ್ತಮಾನದ ವಿದ್ಯ‌ಮಾನಗಳನ್ನು ಗಮನಿಸಬೇಕು. ಈ ಅಭಿರುಚಿ ಬೆಳೆಸಿಕೊಂಡರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು ಎಂದು ಸಲಹೆ ನೀಡಿದರು. 

ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಮಾತನಾಡಿ, ಸರ್ಕಾರ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಎಲ್ಲ ರೀತಿಯಿಂದ ಪ್ರೋತ್ಸಾಹ ನೀಡುತ್ತಿದೆ. ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೆರವಾಗಲಿದೆ ಎಂಬ ಉದ್ದೇಶದಿಂದ ಸರ್ಕಾರ ಚಿಂತನೆ ನಡೆಸಿ, ನೀಡುತ್ತಿದೆ. ಉತ್ತಮ ಉದ್ದೇಶಕ್ಕಾಗಿ ಇದನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜೆಡಿಎಸ್ ತಾಲ್ಲೂಕು ಘಟಕ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಎಪಿಎಂಸಿ ಅಧ್ಯಕ್ಷ ಕೆ.ವಿ.ಮಂಜುನಾಥ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಪುರಸಭೆ ಸದಸ್ಯರಾದ ಕೋಡಿಮಂಚೇನಹಳ್ಳಿ ನಾಗೇಶ್, ಜಿ.ಎ.ರವೀಂದ್ರ, ಜೆಡಿಎಸ್ ನಗರ ಘಟಕ ಅಧ್ಯಕ್ಷ ಮುನಿನಂಜಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಡೇರಿ ನಾಗೇಶ್, ವಿ.ಗೋಪಾಲ್, ಎಂ.ಕುಮಾರ್, ಟಿ.ರವಿ, ಮುತ್ತುರಾಜ್, ಪ್ರಾಂಶುಪಾಲ ಶಿವ ಶಂಕರಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು