ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ

Last Updated 16 ಅಕ್ಟೋಬರ್ 2020, 4:02 IST
ಅಕ್ಷರ ಗಾತ್ರ

ವಿಜಯಪುರ:‘ಶಿಕ್ಷಕರು ವಿದ್ಯಾರ್ಥಿಗಳನ್ನು ಸರಿಯಾದ ಮಾರ್ಗದರ್ಶನದಲ್ಲಿ ಕರೆದೊಯ್ಯುತ್ತಾರೆ. ಹಾಗಾಗಿ, ಸಮಾಜದಲ್ಲಿ ಅವರಿಗೆ ಒಳ್ಳೆಯ ಗೌರವವಿದೆ. ಆದರೆ, ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾದ ಶಿಕ್ಷಕರೇ ಇಂದು ಉತ್ತಮ ಭವಿಷ್ಯಕ್ಕಾಗಿ ಎದುರು ನೋಡುವಂತಾಗಿರುವುದು ವಿಪರ್ಯಾಸ’ ಎಂದು ವಿಧಾನ ಪರಿಷತ್‌ನ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಅವರ ಪತ್ನಿ ವಿದ್ಯಾ ಪುಟ್ಟಣ್ಣ ವಿಷಾದಿಸಿದರು.

ಇಲ್ಲಿನ ಗಿರಿಜಾಶಂಕರ ಕಲ್ಯಾಣ ಮಂಟಪದಲ್ಲಿ ಪುಟ್ಟಣ್ಣ ಅವರ ಪರವಾಗಿ ಮತಯಾಚಿಸಿದ ಬಳಿಕ ಅವರು ಮಾತನಾಡಿದರು.

‘ಪಟ್ಟಣ್ಣ ಅವರು ಖಾಸಗಿ ಶಾಲಾ ಶಿಕ್ಷಕರು ಸೇರಿದಂತೆ ಎಲ್ಲಾ ವರ್ಗದ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ್ದಾರೆ. ಶಿಕ್ಷಕರ ಹಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಯಶಸ್ಸು ಕಂಡಿದ್ದಾರೆ. ಪ್ರತಿಯೊಬ್ಬ ಖಾಸಗಿ ಶಾಲೆಯ ಶಿಕ್ಷಕರಿಗೂ ವಿಮೆ ಮಾಡಿಸುವ ಮೂಲಕ ನೆರವಾಗುವಂತಹ ಕಾರ್ಯಕ್ರಮ ರೂಪಿಸಲು ಚಿಂತನೆ ನಡೆಸಲಾಗಿದೆ’ ಎಂದರು.

ಶಿಕ್ಷಕರ ಸಮಸ್ಯೆಗಳನ್ನು ಅರಿತರಿಗೆ ಮಾತ್ರ ಅವುಗಳನ್ನು ನಿವಾರಣೆ ಮಾಡಲು ಸಾಧ್ಯ. ಹಲವು ವರ್ಷಗಳಿಂದ ಶಿಕ್ಷಕರ ಪರವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುವ ಮೂಲಕ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ. ಅವರ ಪರವಾಗಿ ಹೋರಾಟ ನಡೆಸುವ ಮೂಲಕ ಯಶಸ್ಸು ಕಂಡಿದ್ದಾರೆ. ಗಂಭೀರವಾಗಿ ಉಳಿದಿರುವ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಖುದ್ದಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಶಿಕ್ಷಕ ಎಚ್.ಎಸ್. ರುದ್ರೇಶ್‌ಮೂರ್ತಿ ಮಾತನಾಡಿ, ‘ಪುಟ್ಟಣ್ಣ ಅವರು ಶಿಕ್ಷಕರು ಸ್ವಾಭಿಮಾನದಿಂದ ಸಮಾಜದಲ್ಲಿ ತಲೆಎತ್ತಿ ನಡೆಯುವಂತೆ ಮಾಡುವ ಗುರಿ ಹೊಂದಿದ್ದಾರೆ. ಶೈಕ್ಷಣಿಕ ಕ್ಷೇತ್ರದ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.

‘ಮೊದಲು ಶಿಕ್ಷಕರು ಸದೃಢರಾಗಬೇಕು. ಆ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಬಹುದು’ ಎಂದರು.

ಮುಖಂಡರಾದ ಸೌಮ್ಯಾ ಪ್ರಕಾಶ್, ಸುನೀತಾ ಮಂಜುನಾಥ್, ಶಿಕ್ಷಕರಾದ ಡಾ.ನಾಗರಾಜ್, ವಿ. ಬಸವರಾಜ್, ಪಿ.ಎಂ. ಕೊಟ್ರೇಶ್, ಸೈಯದ್ ರಫೀಕ್, ಪ್ರದೀಪ್ ಕುಮಾರ್, ವೆಂಕಟೇಶ್, ಅಶ್ವಥನಾರಾಯಣ, ಲಕ್ಷ್ಮಣ ಹೂಗಾರ್, ತ್ಯಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT