ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿಯುತ ಮತದಾನ

Last Updated 29 ಅಕ್ಟೋಬರ್ 2020, 3:46 IST
ಅಕ್ಷರ ಗಾತ್ರ

ವಿಜಯಪುರ: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯು ಶಾಂತಿಯುತವಾಗಿ ನಡೆಯಿತು.

ಪಟ್ಟಣದ ನಾಡ ಕಚೇರಿಯಲ್ಲಿ ಮತಗಟ್ಟೆ ತೆರೆಯಲಾಗಿತ್ತು. ವಿಜಯಪುರ ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದಒಟ್ಟು 155 ಮತದಾರರ ಪೈಕಿ 140 ಮಂದಿ ಮತ ಚಲಾಯಿಸಿದ್ದಾರೆ. ಬೆಳಿಗ್ಗೆ 8ಗಂಟೆಗೆ ಆರಂಭವಾದ ಮತದಾನ ಸಂಜೆ 5 ಗಂಟೆಯವರೆಗೂ ನಡೆಯಿತು.

ಮತಗಟ್ಟೆಯಿಂದ 100 ಮೀಟರ್ ದೂರದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತದಾರರ ಬಳಿ ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದ ದೃಶ್ಯ ಕಂಡುಬಂದಿತು.

ಮತದಾನಕ್ಕೆ ಬಂದ ಶಿಕ್ಷಕ ಮತದಾರರಿಗೆ ಆರೋಗ್ಯ ಇಲಾಖೆಯ ನರ್ಸ್ ಲಲಿತಾ ಅವರು ಥರ್ಮಲ್ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್ ಹಾಕಿ ಮತದಾನ ಕೇಂದ್ರದೊಳಗೆ ಕಳುಹಿಸಿದರು. ಚನ್ನರಾಯಪಟ್ಟಣ ಹೋಬಳಿಯ ಮತದಾರರು ನೆಮ್ಮದಿ ಕೇಂದ್ರದಲ್ಲಿ ತೆರೆಯಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು. 63 ಮಂದಿ ಮತದಾರರಲ್ಲಿ 60 ಮತದಾರರು ಮತ ಚಲಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT