ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಅನುಷ್ಠಾನ: ಪೋಸ್ಟರ್‌ ಬಿಡುಗಡೆ

Last Updated 5 ಜೂನ್ 2020, 15:44 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ತಾಲ್ಲೂಕು ಪಂಚಾಯಿತಿ ವತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಮುರುಡಯ್ಯ, ‘ಸಾರ್ವಜನಿಕರಿಗೆ ಮನ್ರೆಗಾ ಯೋಜನೆಯಲ್ಲಿ ಉದ್ಯೋಗವಕಾಶಗಳು ಲಭ್ಯವಿದೆ. ಕೊರೊನೊದಿಂದಾಗಿ ಸಂಕಷ್ಟದಲ್ಲಿರುವವರಿಗೂ ವರದಾನವಾಗಿದೆ. ಮಾಹಿತಿ ತಿಳಿಯಲು ಇಂತಹ ಐ.ಇ.ಸಿ ಚಟುವಟಿಕೆ ಕೈಗೊಳ್ಳಬೇಕು ಹಾಗೂ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸಿ ಪ್ರಚಾರ ಕೈಗೊಳ್ಳಬೇಕು‘ ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ ಮಾತನಾಡಿ, ‘ಸಾರ್ವಜನಿಕರು ವಿವಿಧ ಅನುಷ್ಠಾನ ಇಲಾಖೆಗಳಿಂದ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕೃಷಿಹೊಂಡ ಇಂಗು ಗುಂಡಿ ಕಿಚನ್ ಗಾರ್ಡನ್ ಸೋಕ್ ಪಿಟ್ ನಿರ್ಮಾಣ ಮಾಡಿಕೊಳ್ಳುವಂತೆ’ ತಿಳಿಸಿದರು.

ಗ್ರಾಮೀಣ ಮತ್ತು ಕುಡಿಯುವ ನೀರು ಇಲಾಖೆಯ ಎಇಇ ಯೋಗೀಶ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್, ನಂದಿನಿ, ನಂದಕುಮಾರ್, ಮಲ್ಲೇಶ್‌, ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT