ಗುರುವಾರ , ಏಪ್ರಿಲ್ 22, 2021
25 °C

ಮೊಬೈಲ್ ಕಳ್ಳನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ರಾತ್ರಿ ವೇಳೆ ಒಂಟಿಯಾಗಿ ಸಂಚರಿಸುವ ಕಾರ್ಮಿಕರು ಮತ್ತು ಸಾರ್ವಜನಿಕರನ್ನು ಅಡ್ಡಗಟ್ಟಿ ಅವರಿಂದ ಮೊಬೈಲ್‌ ಕಳವು ಮಾಡುತ್ತಿದ್ದ ಆರೋಪಿಯೊಬ್ಬರನ್ನು ಜಿಗಣಿ ಪೊಲೀಸರು ಬಂಧಿಸಿ ₹ 4ಲಕ್ಷಕ್ಕೂ ಅಧಿಕ ಬೆಲೆ ಬಾಳುವ ವಿವಿಧ ಕಂಪನಿಗಳ 40 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಕ್ಯಾಲಸಹಳ್ಳಿಯ ಸತೀಶ್‌ (20) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 7ರ ಸುಮಾರಿನಲ್ಲಿ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಪ್ಲಾ ಕಂಪನಿ ಸರ್ಕಲ್‌ ಬಳಿ ಹೆಡ್‌ ಕಾನ್‌ಸ್ಟೆಬಲ್‌ ಮಹೇಶ್‌ ಮತ್ತು ಕಾನ್‌ ಸ್ಟೆಬಲ್‌ಪ್ರದೀಪ್‌ ಅವರು ನಾಕಬಂದಿ ನಡೆಸುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಂದ ಮೊಬೈಲ್‌ ಕಸಿದುಕೊಂಡು ಓಡಿ ಹೋಗಲು ಆರೋಪಿ ಸತೀಶ್‌ ಯತ್ನಿಸಿದಾಗ ಆರೋಪಿಯನ್ನು ಬೆನ್ನಟ್ಟಿ ಆರೋಪಿಯನ್ನು ಬಂಧಿಸಿದ್ದಾರೆ. 

ಆರೋಪಿ 3-4 ತಿಂಗಳ ಅವಧಿಯಲ್ಲಿ ಜಿಗಣಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕರು ಮತ್ತು ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ಗಳನ್ನು ಕಳವು ಮಾಡುತ್ತಿದ್ದ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು