ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಣಕು ನ್ಯಾಯಾಲಯ ಸ್ಪರ್ಧೆ: ಕ್ರೈಸ್ಟ್‌ ಕಾಲೇಜು ಪ್ರಥಮ

Published 24 ಮಾರ್ಚ್ 2024, 22:54 IST
Last Updated 24 ಮಾರ್ಚ್ 2024, 22:54 IST
ಅಕ್ಷರ ಗಾತ್ರ

ಆನೇಕಲ್: ಅಲಯನ್ಸ್ ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಬೆಂಗಳೂರಿನ ಕ್ರೈಸ್ಟ್‌ ವಿಶ್ವವಿದ್ಯಾಲಯದ ಅದಿತ್‌ ಶಾ ಪ್ರಥಮ ಮತ್ತು ಗೋವಾದ ಪಣಜಿಯ ವಿ.ಎಂ. ಸಲಗಾಂವಕರ್‌ ಕಾನೂನು ವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪ್ರಥಮ ಬಹುಮಾನವಾಗಿ ₹1 ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನವಾಗಿ ₹60 ಸಾವಿರ ನಗದು ವಿತರಿಸಲಾಯಿತು.  ಸ್ಪರ್ಧೆಯಲ್ಲಿ 10 ರಾಜ್ಯಗಳ 41 ಕಾನೂನು ಮಹಾವಿದ್ಯಾಲಯಗಳು ಪಾಲ್ಗೊಂಡಿದ್ದವು.

ಸ್ಪರ್ಧೆ ಉದ್ಘಾಟಿಸಿದ ಸುಪ್ರೀಂ ಕೋರ್ಟ್‌ ನಿವೃತ್ತ‌ ನ್ಯಾಯಮೂರ್ತಿ ವಿ.ಗೋಪಾಲಗೌಡ, ವಕೀಲ ವೃತ್ತಿಯಲ್ಲಿ ನೈತಿಕತೆ ಅಳವಡಿಸಿಕೊಳ್ಳುವ ಮೂಲಕ ವೃತ್ತಿ ಪಾವಿತ್ರ್ಯತೆ ಕಾಪಾಡಬೇಕು. ಯುವ ವಕೀಲರು ಮತ್ತು ಕಾನೂನು ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

ಅಲಯನ್ಸ್‌ ವಿಶ್ವವಿದ್ಯಾಲಯದ ಸಹ ಕುಲಪತಿ ಅಭಯ್‌ ಛೆಬ್ಬಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT