ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಶಿಕ್ಷಣ ಮಾದರಿ ರೂಪಿಸಿ: ಉಪನ್ಯಾಸಕಿ ವಾಣಿ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ‘ಪ್ರಗತಿಯ ಹೆಜ್ಜೆ’ ಕಾರ್ಯಕ್ರಮ
Last Updated 10 ಮಾರ್ಚ್ 2022, 2:33 IST
ಅಕ್ಷರ ಗಾತ್ರ

ಆನೇಕಲ್: ಶಿಕ್ಷಕರು ಸೃಜನಶೀಲ ಚಟುವಟಿಕೆಗಳ ಮೂಲಕ ಸದಾ ಕ್ರಿಯಾಶೀಲರಾಗಿರಬೇಕು. ಮಕ್ಕಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ವಿಭಿನ್ನ ಚಟುವಟಿಕೆಗಳು, ಯೋಜನೆಗಳು, ಮಾದರಿಗಳನ್ನು ರೂಪಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಿ ವಾಣಿ ತಿಳಿಸಿದರು.

ಪಟ್ಟಣದಲ್ಲಿ ಮಂತ್ರ ಸಂಸ್ಥೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಗತಿಯ ಹೆಜ್ಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನ ವಿವಿಧ ಕ್ಲಸ್ಟರ್‌ಗಳಲ್ಲಿ ಆಯೋಜಿಸಿದ್ದ ಪ್ರಗತಿ ಹೆಜ್ಜೆ ಕಾರ್ಯಕ್ರಮದಲ್ಲಿ ವಿಜೇತ ಶಾಲೆಗಳು ತಾಲ್ಲೂಕು ಮಟ್ಟದ ಪ್ರಗತಿ ಹೆಜ್ಜೆ ಕಾರ್ಯಕ್ರಮದಲ್ಲಿ ತಮ್ಮ ಮಾದರಿಗಳನ್ನು ಪ್ರದರ್ಶಿಸಿದ್ದಾರೆ. ತಮ್ಮ ಚಿಂತನೆಗಳನ್ನು ವಿದ್ಯಾರ್ಥಿಗಳ ಜ್ಞಾನ ಬೆಳೆಯಲು ಅನುಕೂಲವಾಗುವಂತೆ ರೂಪಿಸಿದ್ದಾರೆ. ಇಂತಹ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು ಎಂದರು.

ಮಕ್ಕಳ ಹಕ್ಕುಗಳ ಜಿಲ್ಲಾ ಸಮಿತಿ ಅಧ್ಯಕ್ಷ ಲಕ್ಷ್ಮೀ ಪ್ರಸನ್ನ ಮಾತನಾಡಿ ಮಕ್ಕಳ ಹಕ್ಕುಗಳು, ಆಹಾರ, ಸಮಯ ಪಾಲನೆ, ಕುಟುಂಬ ಸೇರಿದಂತೆ ವಿವಿಧ ವಿಚಾರಗಳಲ್ಲಿ ಮಂಡಿಸಿರುವ ಪ್ರಾಜೆಕ್ಟ್‌ಗಳು ಉತ್ತಮವಾಗಿವೆ ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಕಾರ್ಯಕ್ರಮಗಳು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ, ಕೊರೊನಾ ಹಿನ್ನೆಲೆಯಲ್ಲಿ ಕಲಿಕೆಯಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆ ಸೇರಿದಂತೆ ವಿವಿಧ ವಿಚಾರಗಳಲ್ಲಿ ಪ್ರಾಜೆಕ್ಟ್‌ಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.

ಆನೇಕಲ್‌ ತಾಲ್ಲೂಕಿನ 22 ಕ್ಲಸ್ಟರ್‌ಗಳಿಂದ ಆಯ್ಕೆಗೊಂಡ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ತಮ್ಮ ಶಾಲೆಗಳಲ್ಲಿ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ಪ್ರದರ್ಶನ ನೀಡಿದರು. ಸರ್ಜಾಪುರ ಹೆಣ್ಣುಮಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಪ್ರಥಮ), ಹುಸ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ದ್ವಿತೀಯ), ಯಾರಂಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ತೃತೀಯ) ಬಹುಮಾನ ಪಡೆದವು.

ಅಕ್ಷರ ಫೌಂಡೇಷನ್‌ನ ದಿವ್ಯಾ, ಕಾಂತರಾಜು, ಕೂಡ್ಲು ಸರ್ಕಾರಿ ಪ್ರೌಢಶಾಲೆಯ ಶಂಕರಮೂರ್ತಿ, ಮಂತ್ರ ಸಂಸ್ಥೆಯ ರೇವತಿ, ಬಿಆರ್‌ಸಿ ಭಾಸ್ಕರ್‌, ಮಂತ್ರ ಸಂಸ್ಥೆಯ ಮೌನೇಶ್, ವೆಂಕಟೇಶ್‌, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಡಿ.ಎನ್‌. ವೀರಭದ್ರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಶಿವಣ್ಣ, ಕಾರ್ಯದರ್ಶಿ ಮಂಜುನಾಥ್‌, ಖಜಾಂಚಿ ನಾಗರಾಜು, ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT