ಸೋಮವಾರ, ಆಗಸ್ಟ್ 8, 2022
21 °C

ಮೋದಿ ಜನ್ಮ ದಿನ ಸ್ವಚ್ಛತಾ ಕಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮ ದಿನಾಚರಣೆಯನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ತಾಲ್ಲೂಕಿನ ರಾಜಘಟ್ಟ ಆಂಜನೇಯಸ್ವಾಮಿ ದೇವಾಲಯದ ಆವರಣ ಸ್ವಚ್ಛ ಮಾಡುವ ಮೂಲಕ ಆಚರಿಸಲಾಯಿತು.

ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿಶ್ವಾಸ್‌ಗೌಡ ಮಾತನಾಡಿ, ‘ದೇಶ ಕಂಡ ಅಪ್ರತಿಮ ಪ್ರಧಾನಿ ಮೋದಿ ಅವರು ಕೋವಿಡ್-19 ಸಂಕಷ್ಟದಲ್ಲಿಯೂ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಇವರ ಜನ್ಮ ದಿನವನ್ನು ಸೇವಾ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ವಿವಿಧ ಸೇವಾ ಕಾರ್ಯಗಳನ್ನು ಕೈಗೊಂಡಿದ್ದಾರೆ ಶ್ಲಾಘನೀಯ’ ಎಂದರು.

ಮಂಡಲ ಅಧ್ಯಕ್ಷ ಕಿರಣ್‌,ಅನಿಲ್‌,ಅಜಯ್‌,ಲೋಕೇಶ್‌,ಚಂದನ, ವಿನಯ್‌, ನರೇಶ್‌, ಯಶವಂತ, ಜನಪರಮಂಜು, ಶಿವು ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.