ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಂಪೇಗೌಡ ವಿಮಾನ ನಿಲ್ದಾಣ: ನವೆಂಬರ್‌ನಲ್ಲಿ ವಿದೇಶಗಳಿಗೆ ಹೆಚ್ಚು ಪ್ರಯಾಣಿಕರು

Published 26 ಡಿಸೆಂಬರ್ 2023, 20:01 IST
Last Updated 26 ಡಿಸೆಂಬರ್ 2023, 20:01 IST
ಅಕ್ಷರ ಗಾತ್ರ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಈ ನವೆಂಬರ್‌ನಲ್ಲಿ ಅತೀ ಹೆಚ್ಚು ಪ್ರಯಾಣಿಕರು ವಿದೇಶಗಳಿಗೆ ಪ್ರಯಾಣಿಸಿದ್ದಾರೆ.

ನವೆಂಬರ್‌ ತಿಂಗಳಲ್ಲಿ ಒಟ್ಟು 3,98,792 ಪ್ರಯಾಣಿಕರು ಟರ್ಮಿನಲ್‌ –2ರಿಂದ ವಿದೇಶ ಪ್ರಯಾಣ ಮಾಡಿದ್ದಾರೆ. 2022ರ ನವೆಂಬರ್ ತಿಂಗಳಿಗೆ ಹೋಲಿಸಿದರೆ ಈ ಬಾರಿ ಪ್ರಯಾಣಿಕರ ಸಂಖ್ಯೆ ಶೇ 8.6ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರದ ವಿಮಾನ ನಿಲ್ದಾಣ ಪ್ರಾಧಿಕಾರ ವರದಿ ತಿಳಿಸಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಈ ನವೆಂಬರ್‌ನಲ್ಲಿ 30,75,234 ಪ್ರಯಾಣಿಕರು ದೇಶದ ವಿವಿಧ ನಗರಗಳಿಗೆ ಸಂಚರಿಸಿದ್ದಾರೆ. 

ಇದೇ ವರ್ಷ ವಿಮಾನ ಸಂಚಾರ ಆರಂಭಿಸಿದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ಹೆಚ್ಚು ವಿಮಾನ ಸಂಚರಿಸುತ್ತಿವೆ. ಆಗಸ್ಟ್‌ನಲ್ಲಿ ಕೇವಲ 145 ಪ್ರಯಾಣಿಕರು ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅಕ್ಟೋಬರ್‌ನಲ್ಲಿ 3,338 ಪ್ರಯಾಣಿಕರು, ನವೆಂಬರ್‌ನಲ್ಲಿ 4,622 ಪ್ರಯಾಣಿಕರು ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಿಂದ ನವೆಂಬರ್‌ ತಿಂಗಳಲ್ಲಿ ಹುಬ್ಬಳ್ಳಿಗೆ 31,447 ಪ್ರಯಾಣಿಕರು, ಬೆಳಗಾವಿಗೆ 32,059 ಪ್ರಯಾಣಿಕರು ಸಂಚರಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 44.7ರಷ್ಟು  ಹೆಚ್ಚಳವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT