ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳವೆಬಾವಿಗೆ ಮೋಟಾರ್‌ ವಿಳಂಬ

ಶಾಸಕ ಶರತ್‌ ಬಚ್ಚೇಗೌಡ ಅಸಮಾಧಾನ
Last Updated 4 ಮಾರ್ಚ್ 2021, 2:35 IST
ಅಕ್ಷರ ಗಾತ್ರ

ಹೊಸಕೋಟೆ: 2019-20ನೇ ಸಾಲಿನ ಯೋಜನೆಗಳ ಜಾರಿ ಸಂಬಂಧ ಅಧಿಕಾರಿಗಳು ವಹಿಸಿರುವ ನಿರ್ಲಕ್ಷ್ಯದ ಬಗ್ಗೆ ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ತಾ.ಪಂ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ತಾಂಡ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಯೋಜನೆಯಡಿ ಫಲಾನುಭವಿಗಳು ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಅವರುಮಾತನಾಡಿದರು.

2018-19ನೇ ಸಾಲಿನಲ್ಲಿ ಕೊರೆಸಲಾಗಿರುವ ಕೊಳವೆಬಾವಿಗಳಿಗೆ ಇನ್ನೂ ಮೋಟರ್‌ ಅಳವಡಿಸಿಲ್ಲ. 2019-20ನೇ ಸಾಲಿನ ಯೋಜನೆಗಳು ಜಾರಿ ಮಾಡದಿರುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗಿದೆ. ಕೂಡಲೇ, ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ಉಪ ತಹಶೀಲ್ದಾರ್‌ ಪ್ರಭಾಕರ್‌, ತಾಲ್ಲೂಕು ಪಂಚಾಯಿತಿ ಸದಸ್ಯ ಡಾ.ಡಿ.ಟಿ. ವೆಂಕಟೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT