ಶನಿವಾರ, ಸೆಪ್ಟೆಂಬರ್ 21, 2019
24 °C

ಪುರಸಭೆ  ಚುನಾವಣೆ: ಅಂತಿಮ ದಿನ ನಾಮಪತ್ರ ಸಲ್ಲಿಕೆಗೆ  ಕಸರತ್ತು 

Published:
Updated:
Prajavani

ದೇವನಹಳ್ಳಿ: ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಅಂತಿಮ ದಿನವಾದ್ದರಿಂದ ವಿವಿಧ ಪಕ್ಷಗಳ ಅಭ್ಯರ್ಥಿಗಳು ‘ಬಿ ಫಾರಂ’ ಪಡೆಯಲು ಕಸರತ್ತು ನಡೆಸಿದರು.

‘ಬಿ ಫಾರಂ ವಂಚಿತ ಅನೇಕ ಅಭ್ಯರ್ಥಿಗಳು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್, ಜೆಡಿಎಸ್ ಮುಖಂಡರು ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು. ಆದರೆ, ಪುರಸಭೆ ಚುನಾವಣೆಯಲ್ಲಿ ಬದ್ಧ ವೈರಿಗಳಾಗಿ ಚುನಾವಣೆ ಎದುರಿಸಬೇಕಾದ ಸ್ಥಿತಿಯಲ್ಲಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳು ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಸಾಮೂಹಿಕವಾಗಿ ಪೂಜೆ ಸಲ್ಲಿಸಿದ ಬಳಿಕ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಗಳು ಪವಾಡ ಬಯಲು ಬಸವಣ್ಣ ದೇವಾಲಯದಲ್ಲಿ, ಬಿಜೆಪಿ ಅಭ್ಯರ್ಥಿಗಳು ಪರಮೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ನಾಮಪತ್ರ ಸಲ್ಲಿಸಿದರು.

ಒಟ್ಟು 109 ನಾಮಪತ್ರ ಸಲ್ಲಿಕೆ: ಮೇ9ರಿಂದ ಮೇ16ರವರೆಗೆ ಒಟ್ಟು 23 ವಾರ್ಡ್‌ಗಳಲ್ಲಿ 109 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಚೆನ್ನಬಸಪ್ಪ ತಿಳಿಸಿದರು.

 

Post Comments (+)