ಹೊಸಕೋಟೆ: ನಗರಸಭೆ ಅಂಗಡಿ ಮಳಿಗೆ ಮುಂಭಾಗ ರಾತ್ರಿ ಮಲಗಿದ್ದ ಭಿಕ್ಷುಕನೊಬ್ಬನ ತಲೆ ಮೇಲೆ ಸಿಮೆಂಟ್ ಕಾಂಕ್ರೀಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಮಂಗಳವಾರ ಹಳೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯು ಪೇಪರ್ ಆಯುತ್ತಾ, ಭಿಕ್ಷಾಟನೆ ನಡೆಸುತ್ತಾ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. ಹೆಸರು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಂಕರ್ ಗೌಡ ಅಣ್ಣ ಸಾಹೇಬ್ ಪಾಟೀಲ, ವೃತ್ತ ನಿರೀಕ್ಷಕ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.