ಮುತ್ತಾನಲ್ಲೂರು ಗ್ರಾ.ಪಂ. ಅಧ್ಯಕ್ಷರ ಆಯ್ಕೆ

ಆನೇಕಲ್: ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ತೇಜಸ್ವಿನಿ ಶ್ರೀನಿವಾಸ್ ರೆಡ್ಡಿ ಅವಿರೋಧ ಆಯ್ಕೆಯಾದರು.
ಅಧ್ಯಕ್ಷರಾಗಿದ್ದ ವಿಶ್ವನಾಥ ರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು. ತೇಜಸ್ವಿನಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು.
ಬಳಿಕ ಮಾತನಾಡಿದ ಅವರು, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ರಸ್ತೆ, ಬೀದಿದೀಪ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು. ಶಾಸಕರು ಮತ್ತು ಸಂಸದರ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಎಲ್ಲಾ ಸದಸ್ಯರ ಸಹಕಾರ ಪಡೆಯಲಾಗುವುದು ಎಂದು ಹೇಳಿದರು.
ಶಾಸಕ ಬಿ. ಶಿವಣ್ಣ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗಣ್ಣ, ರಘುಪತಿ ರೆಡ್ಡಿ, ಮೋಹನ್ ಬಾಬು, ಮುಖಂಡರಾದ ಸಿಂಗೇನಅಗ್ರಹಾರ ಗೌರೀಶ್, ಶಂಕರರೆಡ್ಡಿ, ಶ್ರೀಧರ್, ಜಯರಾಮ್ ಸರ್ಜಾ, ರಾಜಾರೆಡ್ಡಿ, ಸುರೇಶ್ ರೆಡ್ಡಿ
ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.