ಮುತ್ಸಂದ್ರ ಗ್ರಾ.ಪಂ: 17 ಸ್ಥಾನದಲ್ಲಿ ಬಿಜೆಪಿ ಬೆಂಬಲಿತರ ಗೆಲುವು

ಹೊಸಕೋಟೆ: ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿ ಮುತ್ಸಂದ್ರ ಗ್ರಾಮ ಪಂಚಾಯಿತಿಯ 23 ಸ್ಥಾನಗಳಿಗೆ ನಡೆದ ಚುನಾವಣೆಯ ಪೈಕಿ 17 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಜಯಭೇರಿ ಬಾರಿಸಿದ್ದಾರೆ.
ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮತ ಎಣಿಕೆ ನಡೆಯಿತು.
23 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 47 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 6 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
ಬಿಜೆಪಿ ಮುಖಂಡರು ಸಂಭ್ರಮಾಚರಣೆ ಮಾಡಿದರು.
ಚುನಾವಣಾಧಿಕಾರಿ ವಿವೇಕಾನಂದ ಗೆದ್ದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಗೆದ್ದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.