ದೊಡ್ಡಬಳ್ಳಾಪುರ: ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಪ್ರಜಾಪ್ರತಿನಿಧಿ ಸ್ಥಾಪಿಸುವ ಮೂಲಕ ಮೈಸೂರು ಸಂಸ್ಥಾನದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಜಾಪ್ರಭುತ್ವದ ರೂವಾರಿಯಾಗಿದ್ದಾರೆ ಎಂದು ತಾಲ್ಲೂಕು ಕ್ಷೇತ್ರಶಿಕ್ಷಣ ಅಧಿಕಾರಿ ಟಿ.ಎಸ್.ಶಂಕರಯ್ಯ ಹೇಳಿದರು.

ನಗರದ ಎಂ.ಎ.ಬಿ.ಎಲ್ ಪ್ರೌಢ ಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ನಡೆದ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ-2025 ಕಾರ್ಯಕ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಮಾತನಾಡಿದರು.

ಸಮಾಜದ ಸರ್ವಾಂಗೀಣ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಯೋಚಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್. ಮೈಸೂರು ಸಂಸ್ಥಾನದಲ್ಲಿ ಮೀಸಲಾತಿ ಜಾರಿಗೊಳಿಸುವ ಮೂಲಕ ಸಾಮಾಜಿಕ ಸುಧಾರಣೆಗೆ ಕಾರಣರಾದರು. ಮಹಾತ್ಮ ಗಾಂಧೀಜಿ ಅವರಿಂದ ರಾಜರ್ಷಿ ಎಂದು ಕರೆಸಿಕೊಂಡ ಅವರು ಕರ್ನಾಟಕ ರಾಜ್ಯವನ್ನು ಆಳಿದ ರಾಜರಲ್ಲಿ ಅತ್ಯಂತ ಜನಪರ ಕಾಳಜಿಯುಳ್ಳರು ಎಂದು ಸ್ಮರಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಮೈಸೂರು ಸಂಸ್ಥಾನ ಸಮಗ್ರ ಅಭಿವೃದ್ಧಿ ಹೊಂದಿತು. ಶಿಕ್ಷಣ, ಕೃಷಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳು ಮಹತ್ವದ ಸಾಧನೆ ಮಾಡಿದವು. ಮೂಢನಂಬಿಕೆಗಳನ್ನು ತೊಡೆದು ಹಾಕುವ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಬೆಳೆಸಿದರು ಎಂದು ತಿಳಿಸಿದರು.

ಮಹಿಳೆಯರಿಗೆ ಶಿಕ್ಷಣ, ಬಾಲ್ಯವಿವಾಹ ನಿಷೇಧ, ವಸತಿ ಶಾಲೆಗಳ ಆರಂಭ, ಅಣೆಕಟ್ಟು ನಿರ್ಮಾಣ, ಆಧುನಿಕ ಕಾರ್ಖಾನೆಗಳ ಸ್ಥಾಪನೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸುವ ಮೂಲಕ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದರು ಎಂದರು.

ಸ್ವಾಮಿ ವಿವೇಕಾನಂದ ಮತ್ತು ಎಂ.ಎ.ಬಿ.ಎಲ್ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಬಿ.ಗುರುದೇವ್, ಕಾರ್ಯನಿರ್ವಾಹಕಣಾಧಿಕಾರಿ ಬಿ.ಪಿ.ಪ್ರಿಯಾಂಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ನಾಗರತ್ನಮ್ಮ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ ಇದ್ದರು.

ದೇಶಿ ತಂತ್ರಜ್ಞಾನ ಅವಲಂಬನೆ ಹೆಚ್ಚಲಿ

ಆಧುನಿಕ ತಂತ್ರಜ್ಞಾನ ಎಂಬ ವಿಷಯ ಕುರಿತು ಮಾತನಾಡಿದ ಆರ್.ಎಲ್.ಜೆ.ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆ.ಸುನೀಲ್ ಕುಮಾರ್ ವೈಜ್ಞಾನಿಕವಾಗಿ ಅಧ್ಯಯನ ಮಾಡುವ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಯೋಚನಾಶಕ್ತಿ ಬೆಳೆಯುತ್ತದೆ. ನಮ್ಮ ದೇಶದವರು ವಿದೇಶಿ ತಂತ್ರಜ್ಞಾನ ಅವಲಂಬಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಯಾವುದೇ ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂದುವರಿದರೆ ಮಾತ್ರ ಅಭಿವೃದ್ಧಿ ಸಾಧಿಸುತ್ತದೆ. ಆಧುನಿಕ ತಂತ್ರಜ್ಞಾನದ ತಿಳುವಳಿಕೆ ಪಡೆಯುವುದರ ಜೊತೆಗೆ ವಿದ್ಯಾರ್ಥಿಗಳು ಹೊಸ ಆವಿಷ್ಕಾರ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.