ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಸರು ನೋಂದಣಿ ಕಡ್ಡಾಯ 

Last Updated 23 ಜುಲೈ 2020, 14:38 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಅನ್ಯ ರಾಜ್ಯಗಳಿಗೆ ಪ್ರಯಾಣಿಸಲು ಇಚ್ಛಿಸುವ ಕಾರ್ಮಿಕರು ಮತ್ತು ವಲಸಿಗರು ತಮ್ಮ ವಿವರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯ’ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಸರು ನೋಂದಾಯಿಸಿದ ಕಾರ್ಮಿಕ ಮತ್ತು ವಲಸಿಗರು ಈ ಮಸ್ಟರಿಂಗ್ ಕೇಂದ್ರಗಳಲ್ಲಿಯೇ ಉಳಿದುಕೊಳ್ಳಬೇಕು. ಉಳಿದುಕೊಳ್ಳಲು ಉಚಿತ ವ್ಯವಸ್ಥೆ ಮಾಡಲಾಗಿರುತ್ತದೆ. ಉಚಿತ ಊಟದ ವ್ಯವಸ್ಥೆ ಹಾಗೂ ವೈದ್ಯಕೀಯ ತಪಾಸಣೆ ನಡೆಸಲಾಗುವುದು. ತಮ್ಮ ರಾಜ್ಯಗಳಿಗೆ ತೆರಳಲು ನೆರವಾಗುವಂತೆ ಅವರನ್ನು ಶ್ರಮಿಕ್ ರೈಲ್ವೇ ಸ್ಟೇಷನ್‍ಗೆ ತಲುಪಿಸಲು ಸಾರಿಗೆ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುವುದು ಎಂದು ಜಿಲ್ಲಾಡಳಿತ ಹೇಳಿದೆ.

ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಸರು ನೋಂದಣಿಗೆ ಮೇಲ್ವಿಚಾರಕರನ್ನಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮಂಜುನಾಥ್ (ಮೊ.ಸಂ:86603 85483), ದೇವನಹಳ್ಳಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರಂಗಪ್ಪ (ಮೊ.ಸಂ:88923 72879), ನೆಲಮಂಗಲ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರವಿ (ಮೊ.ಸಂ:98442 32576), ಹೊಸಕೋಟೆ ತಾಲ್ಲೂಕಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮುನಿಕೃಷ್ಣಪ್ಪ (ಮೊ.ಸಂ:72599 56791) ಅವರನ್ನು ನೇಮಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ನೋಡಲ್ ಅಧಿಕಾರಿಯಾದ ಯಶಸ್ವಿನಿ (ಮೊ.ಸಂ.:94813 89169) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT