ವಿಜಯಪುರ (ದೇವನಹಳ್ಳಿ): ಪಟ್ಟಣದ 12 ಮತ್ತು 13 ನೇ ವಾರ್ಡ್ನಲ್ಲಿ ಶನಿವಾರದಿಂದ ‘ನಮ್ಮ ಕ್ಲಿನಿಕ್' ಕಾರ್ಯಾರಂಭಗೊಂಡಿದ್ದು, ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಈ ವೇಳೆ ಮಾತನಾಡಿ, ಬಡವರಿಗೆ ಆರೋಗ್ಯ ಚಿಕಿತ್ಸೆ ನೀಡುವ ದೃಷ್ಟಿಯಿಂದ ಪಟ್ಟಣದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪಿಸಲಾಗಿದ್ದು, ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ತುರ್ತು ಸಂದರ್ಭಗಳಲ್ಲಿ ದೂರದ ಆಸ್ಪತ್ರೆಗಳಿಗೆ ಹೋಗುವ ಬದಲಿಗೆ ಜನರು ನಮ್ಮ ಕ್ಲಿನಿಕ್ನಲ್ಲಿ ಆರೋಗ್ಯ ಸೇವೆ ಪಡೆಯಲು ಹೆಚ್ಚು ಅನುಕೂಲ ಆಗಿದೆ. ಜನರು ತಮ್ಮ ಆರೋಗ್ಯದ ರಕ್ಷಣೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ಥಳೀಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಪುರಸಭೆ ಸದಸ್ಯ ನಂದಕುಮಾರ್, ಮಾಜಿ ಸದಸ್ಯ ಮುನಿಚಿನ್ನಪ್ಪ, ಮುಖಂಡರಾದ ಮಹೇಶ್, ಸೈಫುಲ್ಲಾ, ಕೆ.ಎಂ.ವೆಂಕಟೇಶ್, ಪ್ರಕಾಶ್, ವೆಂಕಟೇಶ್, ನಾಗಯ್ಯ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.