ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಪೋಷಣ ಅಭಿಯಾನ

Last Updated 29 ಸೆಪ್ಟೆಂಬರ್ 2022, 5:43 IST
ಅಕ್ಷರ ಗಾತ್ರ

ಬಾಶೆಟ್ಟಿಹಳ್ಳಿ(ದೊಡ್ಡಬಳ್ಳಾಪುರ):ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗಳಿಗೆ ಪೌಷ್ಟಿಕ ಆಹಾರಗಳು ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರಗಳನ್ನು ನೀಡುವುದರೊಂದಿಗೆ ಅದರ ಮಹತ್ವ ಕುರಿತು ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ರಂಗಪ್ಪ ಹೇಳಿದರು.

ಬಾಶೆಟ್ಟಿಹಳ್ಳಿಯ ಎಜಾಕ್ಸ್‌ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು.

ಹಿಂದೆ ಸಿರಿಧಾನ್ಯಗಳು, ತರಕಾರಿಗಳನ್ನು ಹೆಚ್ಚಾಗಿ ಬಳಸುವ ಮೂಲಕ ನಮ್ಮ ಹಿರಿಯರು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡಿದ್ದರು. ಹಳ್ಳಿಗಳಲ್ಲಿ ಅಕ್ಕಿಯನ್ನು ನೋಡುತ್ತಿದ್ದುದೇ ಅಪರೂಪವಾಗಿತ್ತು. ಆದರೆ ಈಗ ಅಕ್ಕಿ,ಸಕ್ಕರೆ ಮೊದಲಾದ ಪದಾರ್ಥಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ ಎಂದರು.

ಮಕ್ಕಳು ತರಕಾರಿಗಳನ್ನು ತೆಗೆದಿಟ್ಟು ಊಟ ಮಾಡುತ್ತಿರುವ ಬೆಳವಣಿಗೆ ಹೆಚ್ಚಾಗುತ್ತಿದೆ. ಸಜ್ಜೆ, ನವಣೆ, ರಾಗಿ, ಅರ್ಕ ಮೊದಲಾದ ಧಾನ್ಯಗಳ ಬಳಕೆ ಹೆಚ್ಚಾಗಬೇಕಿದೆ. ಮಕ್ಕಳು ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದೆ. ಮಕ್ಕಳು ಪೌಷ್ಟಿಕಾಂಶ ಆಹಾರಗಳನ್ನು ಸೇವಿಸಬೇಕು. ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡಬಾರದು ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪೌಷ್ಟಿಕ ತರಕಾರಿ ಹಾಗೂ ಧಾನ್ಯಗಳ ಮೂಲಕ ವಿವಿಧ ಚಿತ್ತಾರಗಳನ್ನು ರಚಿಸಿ, ಪೌಷ್ಟಿಕ ಆಹಾರಗಳ ಬಗ್ಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಬಾಶೆಟ್ಟಿಹಳ್ಳಿ ಮುಖಂಡ ಬಿ. ಕೃಷ್ಣಪ್ಪ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಜೈಕುಮಾರ್, ಕಾರ್ಯದರ್ಶಿ, ವಸಂತಗೌಡ, ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಮುನಿಯಪ್ಪ, ಉಪಾಧ್ಯಕ್ಷೆ ಕಲಾವತಿ, ಶಾಲೆಯ ಮುಖ್ಯಶಿಕ್ಷಕಿ ಆರ್.ರಾಜೇಶ್ವರಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಉಪಾಧ್ಯಕ್ಷ ರಾಜಶೇಖರ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT