ನವೋದಯ ವಿದ್ಯಾರ್ಥಿಗಳ ಸಮಾವೇಶ

ದೊಡ್ಡಬಳ್ಳಾಪುರ: ಜವಾಹರ್ ನವೋದಯ ವಿದ್ಯಾಲಯದಲ್ಲಿ 1995-2002ನೇ ಸಾಲಿನ ವಿದ್ಯಾರ್ಥಿಗಳಿಂದ ಪ್ರತಿ ವರ್ಷದಂತೆ ಈ ಬಾರಿಯೂ ಜವಾಹರ್ ನವೋದಯ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಮಾವೇಶ ದಶೋಲ್ಲಾಸ ನಡೆಯಿತು.
ವಿದ್ಯಾಲಯದ ಸಭಾಂಗಣದಲ್ಲಿ 10ನೇ ಸಾಲಿನ ವಿದ್ಯಾರ್ಥಿಗಳ ವತಿಯಿಂದ ಆಯೋಜಿದ್ದ ಸಮಾರಂಭವನ್ನು ಆನ್‌ಲೈನ್ ಮೂಲಕ ಪ್ರಸಾರ ಮಾಡಿದ್ದು ವಿಶೇಷವಾಗಿತ್ತು. ಗೂಗಲ್ ಮೀಟ್ ಮೂಲಕ ಕಾರ್ಯಕ್ರಮ ವೀಕ್ಷಿಸಿ ಅಭಿಪ್ರಾಯ ಹಂಚಿಕೊಂಡರು.
ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ ಮಾತನಾಡಿ, ವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಯ ಜತೆಗೆ ಸಾಮಾಜಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಿರುವುದು ಅಭಿನಂದನೀಯ ಎಂದರು.
ಎಂಜಿನಿಯರ್ ಆಗಿರುವ ಸಿ.ಎಸ್. ಶಶಿಕಿರಣ್ ತಮ್ಮ ವಿದ್ಯಾಭ್ಯಾಸದ ಹಳೆ ನೆನಪುಗಳನ್ನು ಬಿಚ್ಚಿಟ್ಟರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.